ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, . 21. ಯಕ್ಷಗಾನ ಪ್ರದರ್ಶನಕ್ಕೆಂದು ಬೆಂಗಳೂರಿಗೆ ತೆರಳಿದ್ದ ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (67) ಅವರು ಇಂದು ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಇಂದಿನಿಂದ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾನುವಾರ ಬೆಳಗ್ಗೆ ಬೆಂಗಳೂರಿನ ಆರ್ ಕೆ ಭಟ್ಟರ ಮನೆಗೆ ತೆರಳಿದ್ದರು. ಇಂದು ಬೆಳಗ್ಗೆ ಅವರಿಗೆ ಹೃದಯ ಸ್ತಂಭನವಾದಾಗ ಜತೆಗಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

Also Read  ನಟ ದರ್ಶನ್ ರನ್ನು ಬೇರೆಡೆ ಸ್ಥಳಾಂತರಿಸುವಂತೆ ಸಿಎಂ ಸೂಚನೆ

 

 

error: Content is protected !!
Scroll to Top