ಹಿಂದುಳಿದ ವರ್ಗಗಳ ವಿದ್ಯಾರ್ಥಿ ಸೌಲಭ್ಯಗಳಿಗೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಅ. 21. 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಸೌಲಭ್ಯಕ್ಕಾಗಿ ಆನ್‍ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ರವರೆಗೆ ಅವಧಿ ವಿಸ್ತರಿಸಲಾಗಿದೆ.

ಮೆಟ್ರಿಕ್ ನಂತರದ ಕೋರ್ಸುಗಳಾದ ಪಿಯುಸಿ ಸಮಾನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ  ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ ಅರೆಅಲೆಮಾರಿ ವಿದ್ಯಾರ್ಥಿಗಳು ಯೋಜನೆಯ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬೇಕು.

ಆನ್‍ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್‍ ಸೈಟ್ ವಿಳಾಸwww.ssp.postmatric.karnataka.gov.in,  ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ : www.bcwd.karnataka.gov.in/ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005, ಇಮೇಲ್ : bcwdhelpline@gmail.com ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmatrichelp@karnataka.gov.in ದೂರವಾಣಿ ಸಂಖ್ಯೆ: 1902 ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top