ಆಸ್ಪತ್ರೆಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರ ಪತ್ರ ಕಡ್ಡಾಯ

(ನ್ಯೂಸ್ ಕಡಬ) newskadaba.com ಅ. 21. ದಕ್ಷಿಣ ಕನ್ನಡ ಜಿಲ್ಲೆಯ 30 ಹಾಸಿಗೆಗಿಂತ ಹೆಚ್ಚಿರುವ ಆಸ್ಪತ್ರೆಗಳು ನಿಯಾಮಾನುಸಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ 1974ರ ಜಲ (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ, 1981ರ ವಾಯು (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ ಸ್ಥಾಪನ ಸಮ್ಮತಿ/ ಚಾಲನಾ ಸಮ್ಮತಿ ಪತ್ರ ಮತ್ತು ಜೀವ ವೈದ್ಯಕೀಯ ತ್ಯಾಜ್ಯ ಕಾಯ್ದೆ 2016 ರಡಿಯಲ್ಲಿ ಅಧಿಕಾರ ಪತ್ರ ಪಡೆಯುವುದು ಕಡ್ಡಾಯವಾಗಿದೆ.

30 ಹಾಸಿಗೆಗಿಂತ ಕಡಿಮೆ ಹಾಗೂ ಹಾಸಿಗೆ ರಹಿತ ಆಸ್ಪತ್ರೆಗಳು ನಿಯಾಮಾನುಸಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಜೀವ ವೈದ್ಯಕೀಯ ತ್ಯಾಜ್ಯ ಕಾಯ್ದೆ 2016ರ ಶ್ವೇತವರ್ಣದಡಿಯಲ್ಲಿ ಜೀವ ವೈದ್ಯಕೀಯ ತ್ಯಾಜ್ಯ ಅಧಿಕಾರ ಪತ್ರ (Bio Medical Waste
Authorization) ಪಡೆಯುವುದು ಹಾಗೂ ಕಡ್ಡಾಯವಾಗಿದೆ.

Also Read  ಒಂದೆರಡು ದಿನಗಳಲ್ಲಿ ರೈತರ ಒಂದು‌ ಲಕ್ಷ ರೂ. ವರೆಗಿನ ಸಾಲ ಮನ್ನಾ ► ನೂತನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ

ಈ ಹಿನ್ನೆಲೆಯಲ್ಲಿ ಮಂಡಳಿಯಿಂದ ಸ್ಥಾಪನ ಸಮ್ಮತಿ/ ಚಾಲನಾ ಸಮ್ಮತಿ ಪತ್ರ/ಅಧಿಕಾರ ಪತ್ರ ಪಡೆದು ನವೀಕರಣಗೊಳಿಸದೇ ಹಾಗೂ ಪಡೆಯದೇ ಕಾರ್ಯ ನಿರ್ವಹಿಸುತ್ತಿರುವವರಿಗೆ ಮಂಡಳಿಯಿಂದ ಸ್ಥಾಪನ ಸಮ್ಮತಿ/ ಚಾಲನಾ ಸಮ್ಮತಿ ಪತ್ರ/ಅಧಿಕಾರ ಪತ್ರ ಪಡೆದು ಕಾರ್ಯನಿರ್ವಹಿಸುತ್ತಿರುವಂತೆ ಈ ಮೂಲಕ ಸೂಚಿಸಲಾಗಿದೆ. ತಪ್ಪಿದಲ್ಲಿ ಮಂಡಳಿಯು ಅನ್ವಯವಾಗುವ ಕಾನೂನಿನ ಪ್ರಕಾರ ಕ್ರಮ ಜರುಗಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ಕಛೇರಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಬೈಕಂಪಾಡಿ ಕೈಗಾರಿಕಾ ಪ್ರದೇಶ ಮಂಗಳೂರು (ದೂರವಾಣಿ ಸಂಖ್ಯೆ: 2408239)  ಸಂಪರ್ಕಿಸುವಂತೆ ಪರಿಸರ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top