ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, . 21. ಭಾರತದ ವಿವಿಧ ಭಾಗಗಳ ಏರ್ ಇಂಡಿಯಾ ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಈ ಪಟ್ಟಿಯಲ್ಲಿ ಭಾನುವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಹೊರಟಿದ್ದ ವಿಮಾನವೂ ಸೇರಿದೆ.

ಮಧ್ಯಾಹ್ನ 12:35 ರ ಸುಮಾರಿಗೆ ಸ್ಕಿಜೋಫ್ರೇನಿಯಾ 111 ಎಂಬ ಖಾತೆಯಿಂದ ಟ್ವಿಟರ್‌ನಲ್ಲಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಭಾರತದ ವಿವಿಧ ಭಾಗಗಳಲ್ಲಿ ಆರು ಏರ್ ಇಂಡಿಯಾ ವಿಮಾನಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಸಂದೇಶದಲ್ಲಿ ತಿಳಿಸಲಾಗಿದೆ. ಮಂಗಳೂರಿನ ಏರ್ ಇಂಡಿಯಾ ಸಿಬ್ಬಂದಿ ಮಧ್ಯಾಹ್ನ 1:30ರ ಸುಮಾರಿಗೆ ಈ ಸಂದೇಶವನ್ನು ಗಮನಿಸಿ ತಕ್ಷಣ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Also Read  ನಾಳೆ(ಡಿ.26) ಕಡಬದಲ್ಲಿ ಸಂಯುಕ್ತ ಕ್ರಿಸ್ಮಸ್ ಆಚರಣೆ ► ಕ್ರಿಸ್ಮಸ್ ಸಂದೇಶ ರ್ಯಾಲಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

 

 

error: Content is protected !!
Scroll to Top