ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕನ್ನಡ ರಾಜ್ಯೋತ್ಸವ: ಎಲ್ಲಾ ಸಿದ್ದತೆಗೆ ಅಪರ ಜಿಲ್ಲಾಧಿಕಾರಿ ಸೂಚನೆ – News Kadaba

ಕನ್ನಡ ರಾಜ್ಯೋತ್ಸವ: ಎಲ್ಲಾ ಸಿದ್ದತೆಗೆ ಅಪರ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಅ. 21. ಜಿಲ್ಲಾಡಳಿತ ವತಿಯಿಂದ ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆಗಳು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್.ಜಿ ಸೂಚಿಸಿದ್ದಾರೆ. ಅವರು ಶುಕ್ರವಾರದಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನವೆಂಬರ್ 1ರಂದು ನೆಹರೂ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಜಿಲ್ಲಾ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು. ಎಲ್ಲ ಇಲಾಖೆಗಳು ಈ ಸಂಬಂಧ ಅಗತ್ಯ ಸಿದ್ಧತೆಗಳನ್ನು ನಡೆಸಿ ಯಾವುದೇ ಲೋಪಗಳಾಗದಂತೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಹೇಳಿದರು. ಸಭೆಯಲ್ಲಿ ಅಪರ ಪೊಲೀಸ್ ಅಧೀಕ್ಷಕ ರಾಜೇಂದ್ರ, ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ್, ಮಹಾನಗರ ಪಾಲಿಕೆ ಉಪಆಯುಕ್ತ ಗಿರೀಶ್ ನಂದನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕ ರಾಜೇಶ್ ಜಿ, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Scroll to Top