(ನ್ಯೂಸ್ ಕಡಬ) newskadaba.com ಅ. 21. ಕೈಗಾರಿಕೆಗಳು, ಉದ್ದಿಮೆಗಳು, ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು, ಕ್ಲಿನಿಕ್ ಗಳು, ಮಿಲ್‍ಗಳು, ವಾಣಿಜ್ಯ ಸಂಕಿರ್ಣಗಳು, ವಸತಿ ಸಮುಚ್ಚಯಗಳು (ಅಪಾರ್ಟ್‍ಮೆಂಟ್‍ಗಳು), ಸಮುದಾಯ ಭವನಗಳು, ಕಲ್ಯಾಣ ಮಂಟಪಗಳು ನಿಯಾಮಾನುಸಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸ್ಥಾಪನ ಸಮ್ಮತಿ/ ಚಾಲನಾ ಸಮ್ಮತಿ ಪತ್ರ ಪಡೆಯುವುದು ಕಡ್ಡಾಯವಾಗಿರುತ್ತದೆ.
ಈ ಹಿನ್ನಲೆಯಲ್ಲಿ ಮಂಡಳಿಯಿಂದ ಸ್ಥಾಪನ ಸಮ್ಮತಿ/ ಚಾಲನಾ ಸಮ್ಮತಿ ಪತ್ರ ಪಡೆದು ನವೀಕರಣಗೊಳಿಸದೇ ಹಾಗೂ ಪಡೆಯದೆ ಕಾರ್ಯನಿರ್ವಹಿಸುತ್ತಿರುವವರಿಗೆ ಮಂಡಳಿಯಿಂದ ಸ್ಥಾಪನಾ ಸಮ್ಮತಿ ಪತ್ರ ಪಡೆದು ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ತಪ್ಪಿದಲ್ಲಿ ಮಂಡಳಿಯು ಅನ್ವಯವಾಗುವ ಕಾನೂನಿನ ಪ್ರಕಾರ ಕ್ರಮ ಜರುಗಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ಕಛೇರಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಬೈಕಂಪಾಡಿ ಕೈಗಾರಿಕಾ ಪ್ರದೇಶ, ಮಂಗಳೂರು ಇಲ್ಲಿ ಸಂಪರ್ಕಿಸಲು (ದೂರವಾಣಿ ಸಂಖ್ಯೆ: 2408239) ಮಂಗಳೂರು ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿಯ ಪ್ರಕಟಣೆ ತಿಳಿಸಿದೆ.