ಡಿಕೆ. ಶಿವಕುಮಾರ್ ವಿರುದ್ಧ ಕೇಸ್: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ

(ನ್ಯೂಸ್ ಕಡಬ) newskadaba.com .21 ಬೆಂಗಳೂರು:  ಡಿಸಿಎಂ ಡಿಕೆ ಶಿವಕುಮಾರ್  ವಿರುದ್ಧ ದಾಖಲಿಸಲಾಗದ್ದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ಮುಂದುವರಿಸುವುದಕ್ಕೆ ಸಂಬಂಧಿಸಿದಂತೆ ಸಿಬಿಐ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಕುರಿತು ತನಿಖೆಗೆ ನೀಡಲಾಗಿದ್ದ ಅನುಮತಿಯನ್ನು ಸಿಎಂ ಸಿದ್ದರಾಮಯ್ಯ ಸರಕಾರ ಹಿಂದೆಗೆದುಕೊಂಡಿತ್ತು.

ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಆದೇಶ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಬೆನ್ನಲ್ಲೇ, ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿ ಸಲ್ಲಿಕೆ ಮಾಡಿದೆ ಎಂದು ತಿಳಿದು ಬಂದಿದೆ.

Also Read  ಗೋಕರ್ಣದಲ್ಲಿ ಹೊಂಡಕ್ಕೆ ಬಿದ್ದ ಕಾರು ➤ ಓರ್ವ ಮೃತ್ಯು..!!

error: Content is protected !!
Scroll to Top