ಮೂರು ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com ಕಲಬುರಗಿ, ಅ. 21. ಕ್ಷುಲ್ಲಕ ವಿಷಯಕ್ಕೆ ತಾಯಿಯೊಬ್ಬಳು ತನ್ನ ಮೂವರು ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಂಚೋಳಿ ತಾಲೂಕಿನ ಜಂಗ್ಲಿ ಪೀರ್ ತಾಂಡಾದಲ್ಲಿ ಇಂದು ನಡೆದಿರುವುದಾಗಿ ವರದಿಯಾಗಿದೆ.

ಮೂವರನ್ನೂ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗೀತಾಬಾಯಿ ಸಂತೋಷ ರಾಠೋಡ್ (30) ಎಂಬವರು ಈ ಕೃತ್ಯ ಎಸಗಿದ ಮಹಿಳೆ. ಮಕ್ಕಳಾದ ಚೈತನ್ಯ (4) ಧನುಷ್ (3) ಮತ್ತು ಲಕ್ಷ್ಮೀ (ಒಂದೂವರೆ ತಿಂಗಳ ಮಗು)ಗೆ ವಿಷ ಕುಡಿಸಿದ ಗೀತಾಬಾಯಿ ಸಹ ವಿಷ ಸೇವನೆ ಮಾಡಿದ್ದು, ಸದ್ಯ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

Scroll to Top