(ನ್ಯೂಸ್ ಕಡಬ) newskadaba.com ಅ. 21. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ನಗ-ನಗದು ಕದ್ದೊಯ್ದ ಘಟನೆ ಸುಬ್ರಹ್ಮಣ್ಯ ವ್ಯಾಪ್ತಿಯ ಬಳ್ಪ ಗ್ರಾಮದಲ್ಲಿ ನಡೆದಿದೆ.
ಬಳ್ಪ ಗ್ರಾಮದ ಅಕ್ಕೇಣಿ ಸುಂದರ ಗೌಡ ಎಂಬವರು ತಮ್ಮ ಕುಟುಂಬದೊಂದಿಗೆ ಅ. 17ರಂದು ಸಂಜೆ ಮನೆಗೆ ಬೀಗ ಹಾಕಿ ತಮ್ಮ ಮಗಳ ಮನೆಗೆ ಹೋಗಿದ್ದರು. ರವಿವಾರ ಮಧ್ಯಾಹ್ನ ಮನೆಗೆ ಹಿಂತಿರುಗಿ ಬಂದಾಗ ಮನೆಯ ಎದುರು ಬಾಗಿಲಿನ ಬೀಗ ಮುರಿದಿರುವುದನ್ನು ಗಮನಿಸಿ ಮನೆಯೊಳಗೆ ಹೋಗಿ ನೋಡಿದಾಗ 12 ಲಕ್ಷ ರೂ. ಮತ್ತು 28 ಪವನ್ ಚಿನ್ನ ಕಾಣೆಯಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.