ನಾಳೆ ರಾಜ್ಯದ ಅತಿ ಎತ್ತರದ ಶ್ರೀರಾಮಾಂಜನೇಯ ಮೂರ್ತಿ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, . 21. ರಾಜಾಜಿನಗರದ ಶ್ರೀರಾಮಮಂದಿರದಲ್ಲಿ ಶ್ರೀರಾಮ ಸೇವಾ ಮಂಡಳಿಯಿಂದ ಕರ್ನಾಟಕದ ಅತಿ ಎತ್ತರದ 63 ಅಡಿ ಉದ್ದದ ಶ್ರೀರಾಮಾಂಜನೇಯ ಪ್ರತಿಮೆಯ ಚರ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮ ಅ.21 ರಿಂದ ಮೂರು ದಿನಗಳ ಕಾಲ ಅದ್ದೂರಿಯಾಗಿ ನೆರವೇರಲಿದೆ. 23 ರಂದು ವಿಧ್ಯುಕ್ತವಾಗಿ ಮೂರ್ತಿ ಪ್ರತಿಷ್ಠಾಪಿಸಲಾಗುತ್ತದೆ ಎಂದು ಮಾಗಡಿ ಕೆಂಪೇಗೌಡ ಅಭಿವೃದ್ದಿ ಸಮಿತಿ ಅಧ್ಯಕ್ಷ ಹೆಚ್.ಎಂ.ಕೃಷ್ಣಮೂರ್ತಿ ತಿಳಿಸಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ನಿರ್ಮಲಾನಂದನಾಥ ಸ್ವಾಮೀಜಿರವರ ದಿವ್ಯ ಸಾನಿಧ್ಯದಲ್ಲಿ ಈ ಮೂರ್ತಿ ಲೋಕಾರ್ಪಣೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ರಾಜ್ಯದ ಪ್ರಮುಖ ಧಾರ್ಮಿಕ ಮುಖಂಡರು, ಧರ್ಮಗುರುಗಳು, ರಾಜಕೀಯ ನೇತರಾರರ ಸಮ್ಮುಖದಲ್ಲಿ, ಭಕ್ತರ ಅಮಿತೋತ್ಸಾಹದ ನಡುವೆ ಮೂರ್ತಿ ಪ್ರತಿಷ್ಠಾಪನೆ ನೆರವೇರಲಿದೆ.

Also Read  ವಿದ್ಯಾರ್ಥಿ ನಿಲಯಗಳ ದಾಖಲಾತಿ - ಅರ್ಜಿ ಆಹ್ವಾನ

 

error: Content is protected !!
Scroll to Top