ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಂತೆ ಕರ್ನಾಟಕ ಸರಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ಬಂಧ

(ನ್ಯೂಸ್ ಕಡಬ) newskadaba.com .21 ಹೊಸದಿಲ್ಲಿ :  ಮುಂದಿನ ಆದೇಶದವರೆಗೆ ಎಲ್ಲಾ ಜಿಲ್ಲೆಗಳಲ್ಲಿ 8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ಬಂಧ ವಿಧಿಸಿದೆ.

ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳ ವಿರುದ್ಧದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಅವರ ಪೀಠವು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ ಮತ್ತು ಈ ವಿಧಾನವನ್ನು ಎಲ್ಲಿಯೂ ಅಳವಡಿಸಿಕೊಂಡಿಲ್ಲ ಎಂದು ಹೇಳಿದೆ. ನಿಮಗೆ ವಿದ್ಯಾರ್ಥಿಗಳ ಕಲ್ಯಾಣದ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ ಉತ್ತಮ ಶಾಲೆಗಳನ್ನು ತೆರೆಯಿರಿ,  8, 9 ಮತ್ತು 10ನೇ ತರಗತಿಗಳಿಗೆ ಅರ್ಧವಾರ್ಷಿಕ ಪರೀಕ್ಷೆಯನ್ನು ಯಾವುದೇ ಜಿಲ್ಲೆಯಲ್ಲಿ ನಡೆಸದಿದ್ದರೆ, ಆ ಜಿಲ್ಲೆಗಳಲ್ಲಿ ನಡೆಸಲು ಅನುಮತಿ ನೀಡುವುದಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ.

Also Read  ಚಿನ್ನದ ದರದಲ್ಲಿ ಇಂದು ಕೊಂಚ ಏರಿಕೆ

error: Content is protected !!
Scroll to Top