ಅತ್ಯಾಚಾರ ಪ್ರಕರಣ- ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ

(ನ್ಯೂಸ್ ಕಡಬ) newskadaba.com ಬೆಂಗಳೂರು, . 21. ಅತ್ಯಾಚಾರ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಪ್ರಜ್ವಲ್‌ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ವಿಚಾರಣೆ ನಡೆಸಿದ್ದ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು ಮೂರು ಅರ್ಜಿಗಳನ್ನು ವಜಾಗೊಳಿಸಿದೆ. ಪರಪ್ಪನ ಅಗ್ರಹಾರದಲ್ಲಿರುವ ಪ್ರಜ್ವಲ್ ರೇವಣ್ಣ ಅವರು ನಾಲ್ಕು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.

Also Read  ಕನ್ನಡ ಬಿಗ್ ಬಾಸ್​ 8 ಸೆಕೆಂಡ್​ ಇನ್ನಿಂಗ್ಸ್ ಆರಂಭ

 

error: Content is protected !!
Scroll to Top