ಪಶುಪಾಲನಾ ಇಲಾಖೆಯಲ್ಲಿ 700 ಡಿ ಗ್ರೂಪ್ ನೇಮಕಾತಿಗೆ ಸಿಎಂ ಗ್ರೀನ್ ಸಿಗ್ನಲ್..!

(ನ್ಯೂಸ್ ಕಡಬ) newskadaba.com. 21. ಪಶುಪಾಲನಾ ಇಲಾಖೆಯಲ್ಲಿ 700 ʼಡಿʼ ಗ್ರೂಪ್‌ ನೌಕರರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮತಿ ನೀಡಿದ್ದು, ಶೀಘ್ರವೇ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪಶುಸಂಗೋಪನಾ ಸಚಿವರಾದ ಕೆ.ವೆಂಕಟೇಶ್‌ ತಿಳಿಸಿದ್ದಾರೆ.

ಈ ಕುರಿತು ಪಶುಪಾಲನಾ ಇಲಾಖೆ, ಪಶುವೈದ್ಯಕೀಯ ಇಲಾಖೆ ಹಾಗೂ ಕರ್ನಾಟಕ ಪಶು ವೈದ್ಯಕೀಯ ಸಂಘದ ಸಹಯೋಗದಲ್ಲಿ ಇಲ್ಲಿನ ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಆಯೋಜಿಸಲಾಗಿದ್ದ ಪಶುವೈದ್ಯರ ರಾಜ್ಯಮಟ್ಟದ ತಾಂತ್ರಿಕ ವಿಚಾರಸಂಕಿರಣ ಮತ್ತು ಕಾಲುಬಾಯಿ‌ ಜ್ವರದ ವಿರುದ್ಧ 6ನೇ ಸುತ್ತಿನ ಲಸಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರವು 400 ಪಶುವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡಿದ್ದು, 400 ಕಾಯಂ ವೈದ್ಯರ ನೇಮಕಾತಿಗೆ ಕೆಪಿಎಸ್‌ಸಿ ಮಟ್ಟದಲ್ಲಿ ಪ್ರಕ್ರಿಯೆ ನಡೆದಿದೆ ಎಂದು ಹೇಳಿದರು. ಈಗ ರಾಜ್ಯದಲ್ಲಿ ಖಾಸಗಿ ಪಶುವೈದ್ಯ ಕಾಲೇಜು ಆರಂಭಿಸಲು ನಿರ್ಬಂಧ ಹೇರಲಾಗಿದೆ. ಹೊಸದಾಗಿ ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ಕೊಕಟನೂರ ಹಾಗೂ ಪುತ್ತೂರಲ್ಲಿ ಸರ್ಕಾರಿ ಕಾಲೇಜುಗಳನ್ನು ಈ ವರ್ಷವೇ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

Also Read  ನರ್ಸಿಂಗ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ - ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹಲವು ಉದ್ಯೋಗಗಳು..

 

error: Content is protected !!
Scroll to Top