ಬಂಗಾಳ ಕೊಲ್ಲಿ ತೀರದ ಪ್ರದೇಶಗಳಿಗೆ ಅ.24 ರಂದು ಅಪ್ಪಳಿಸಲಿದೆ ಡಾನಾ ಚಂಡಮಾರುತ

(ನ್ಯೂಸ್ ಕಡಬ) newskadaba.com .21 ಭುವನೇಶ್ವರ : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಅ.24ರಂದು ಬಂಗಾಳಕೊಲ್ಲಿ ತೀರದ ಪ್ರದೇಶಗಳಿಗೆ ಡಾನಾ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. 

ಪೂರ್ವ- ಮಧ್ಯ ಬಂಗಾಳಕೊಲ್ಲಿ ಹಾಗೂ ಅಂಡಮಾನ್ ಸಮುದ್ರದ ಉತ್ತರಕ್ಕೆ ವಾಯುಭಾರ ಕುಸಿತ ಉಂಟಾಗಿದೆ. ಇದು ಪಶ್ಚಿಮ- ವಾಯುವ್ಯ ದಿಕ್ಕಿನೆಡೆಗೆ ಚಲಿಸಿ ಅ.23ರ ವೇಳೆಗೆ ಅದು ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಅ.24 ರ ವೇಳೆಗೆ ಇದು ತೀವ್ರ ಚಂಡಮಾರುತವಾಗಿ ತೀವ್ರಗೊಂಡು ಉತ್ತರ ಬಂಗಾಳ ಕೊಲ್ಲಿಯ ತೀರ ಪ್ರದೇಶಕ್ಕೆ ಅಪ್ಪಳಿಸಲಿದೆ ಎಂದು ಹೇಳಲಾಗಿದೆ.ವಾಯುವ್ಯ ದಿಕ್ಕಿಗೆ ಚಲಿಸಲಿರುವ ಈ ಚಂಡಮಾರುತ ಅ.24ರಂದು ರಾತ್ರಿ ಅಥವಾ ಅ.25ರಂದು ಮುಂಜಾನೆ ಒಡಿಶಾದ ಪುರಿಗೆ ಅಪ್ಪಳಿಸಲಿದೆ. ಈ ವೇಳೆ ಗಾಳಿಯ ವೇಗ ಗಂಟೆಗೆ 100 ರಿಂದ 120 ಕಿಲೋಮೀಟರ್ ಇರುವ ಸಾಧ್ಯತೆ ಇದೆ. ಹೀಗಾಗಿ ಇಂದು ಸಂಜೆಯೊಳಗೆ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರು ದಡ ಸೇರುವಂತೆ ಸೂಚನೆ ನೀಡಲಾಗಿದೆ.

Also Read  ಭಾರಿ ಮಳೆಗೆ ಕೊಲ್ಲಮೊಗ್ರದ ಮನೆಗಳಿಗೆ ನುಗ್ಗಿದ ನೀರು

error: Content is protected !!
Scroll to Top