ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬಂಗಾಳ ಕೊಲ್ಲಿ ತೀರದ ಪ್ರದೇಶಗಳಿಗೆ ಅ.24 ರಂದು ಅಪ್ಪಳಿಸಲಿದೆ ಡಾನಾ ಚಂಡಮಾರುತ – News Kadaba

ಬಂಗಾಳ ಕೊಲ್ಲಿ ತೀರದ ಪ್ರದೇಶಗಳಿಗೆ ಅ.24 ರಂದು ಅಪ್ಪಳಿಸಲಿದೆ ಡಾನಾ ಚಂಡಮಾರುತ

(ನ್ಯೂಸ್ ಕಡಬ) newskadaba.com ಅ.21 ಭುವನೇಶ್ವರ : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಅ.24ರಂದು ಬಂಗಾಳಕೊಲ್ಲಿ ತೀರದ ಪ್ರದೇಶಗಳಿಗೆ ಡಾನಾ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. 

ಪೂರ್ವ- ಮಧ್ಯ ಬಂಗಾಳಕೊಲ್ಲಿ ಹಾಗೂ ಅಂಡಮಾನ್ ಸಮುದ್ರದ ಉತ್ತರಕ್ಕೆ ವಾಯುಭಾರ ಕುಸಿತ ಉಂಟಾಗಿದೆ. ಇದು ಪಶ್ಚಿಮ- ವಾಯುವ್ಯ ದಿಕ್ಕಿನೆಡೆಗೆ ಚಲಿಸಿ ಅ.23ರ ವೇಳೆಗೆ ಅದು ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಅ.24 ರ ವೇಳೆಗೆ ಇದು ತೀವ್ರ ಚಂಡಮಾರುತವಾಗಿ ತೀವ್ರಗೊಂಡು ಉತ್ತರ ಬಂಗಾಳ ಕೊಲ್ಲಿಯ ತೀರ ಪ್ರದೇಶಕ್ಕೆ ಅಪ್ಪಳಿಸಲಿದೆ ಎಂದು ಹೇಳಲಾಗಿದೆ.ವಾಯುವ್ಯ ದಿಕ್ಕಿಗೆ ಚಲಿಸಲಿರುವ ಈ ಚಂಡಮಾರುತ ಅ.24ರಂದು ರಾತ್ರಿ ಅಥವಾ ಅ.25ರಂದು ಮುಂಜಾನೆ ಒಡಿಶಾದ ಪುರಿಗೆ ಅಪ್ಪಳಿಸಲಿದೆ. ಈ ವೇಳೆ ಗಾಳಿಯ ವೇಗ ಗಂಟೆಗೆ 100 ರಿಂದ 120 ಕಿಲೋಮೀಟರ್ ಇರುವ ಸಾಧ್ಯತೆ ಇದೆ. ಹೀಗಾಗಿ ಇಂದು ಸಂಜೆಯೊಳಗೆ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರು ದಡ ಸೇರುವಂತೆ ಸೂಚನೆ ನೀಡಲಾಗಿದೆ.

Scroll to Top