(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಮಾ.18. ಆಳ್ವಾಸ್ ಕಾಲೇಜಿನ ಹಾಸ್ಟೆಲಿನಲ್ಲಿದ್ದ ವಿದ್ಯಾರ್ಥಿಗಳಿಗೆ ಶನಿವಾರ ರಾತ್ರಿ ಕಾಲೇಜು ಸಿಬ್ಬಂದಿ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ಭಾನುವಾರದಂದು ನಡೆದಿದೆ.
ಕಾಲೇಜಿನ ಪುಷ್ಪಗಿರಿ ಹಾಸ್ಟೆಲಿನಲ್ಲಿದ್ದ ಕೆಲವು ವಿದ್ಯಾರ್ಥಿಗಳು ಪರೀಕ್ಷೆ ಮುಗಿದ ಖುಷಿಯಿಂದ ಸಂಭ್ರಮ ಆಚರಿಸುತ್ತಿದ್ದರು ಎನ್ನಲಾಗಿದೆ. ಇದನ್ನು ವಿರೋಧಿಸಿ ವಾರ್ಡನ್ ರಾಜೇಶ್ ಹಾಗೂ ಸಿಬ್ಬಂದಿಗಳು ಹಲವು ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿದ್ದಾರೆಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಹಲ್ಲೆಯಿಂದ ಹಲವು ವಿದ್ಯಾರ್ಥಿಗಳ ಸೊಂಟ, ಬೆನ್ನು, ಕುತ್ತಿಗೆ, ಕೈಗೆ ಗಾಯಗಳಾಗಿವೆ. ಹಲ್ಲೆ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಮೂಲಕ ಆಳ್ವಾಸ್ ಕಾಲೇಜು ಮತ್ತೊಮ್ಮೆ ವಿವಾದದಲ್ಲಿ ಸಿಲುಕಿದೆ.
Also Read ಪುತ್ತೂರು: ಚೂರಿ ತೋರಿಸಿ ಬೆದರಿಸಿ, ಮನೆಯವರನ್ನು ಕಟ್ಟಿಹಾಕಿ ದರೋಡೆ ► ಹಣ, ಚಿನ್ನಾಭರಣ ದೋಚಿದ ದರೋಡೆಕೋರರು