ಎಸ್​ಎಸ್​ಎಲ್​ಸಿ ಮಧ್ಯವಾರ್ಷಿಕ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಎಚ್ಚೆತ್ತ ಶಿಕ್ಷಣ ಇಲಾಖೆ ಮುಖ್ಯ ಪರೀಕ್ಷೆಗೆ ಕಠಿಣ ನಿಯಮ ಜಾರಿಗೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ. 22.  ಕಳೆದ ಸಾಲಿನ ಎಸ್​ಎಸ್​ಎಲ್​ಸಿ ಫಲಿತಾಂಶ ಕುಸಿದ ಬೆನ್ನಲ್ಲೇ ಶಿಕ್ಷಣ ಇಲಾಖೆ ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ವೆಬ್ ಕಾಸ್ಟಿಂಗ್ ಹಾಗೂ ಇತರ ಕಠಿಣ ನಿಯಮದ ಪರಿಣಾಮ ಫಲಿತಾಂಶ ಕುಸಿತ ಆಯಿತು ಎಂಬ ಟೀಕೆ ವ್ಯಕ್ತವಾಗಿತ್ತು. ಇದೀಗ ಶಿಕ್ಷಣ ಇಲಾಖೆ ಎಚ್ಚೆತ್ತುಗೊಂಡಿದ್ದು, ಎಸ್ಎಸ್ಎಲ್​ಸಿ ಮುಖ್ಯ ಪರೀಕ್ಷೆಗೆ ಮತ್ತಷ್ಟು ಕಠಿಣ ರೂಲ್ಸ್ ಜಾರಿಗೆ ಪ್ಲಾನ್ ಮಾಡಿದೆ.

ಈ ಬೆಳವಣಿಗೆ ಬೆನ್ನಲ್ಲೇ ಎಚ್ಚೆತ್ತುಗೊಂಡಿರುವ ಶಿಕ್ಷಣ ಇಲಾಖೆ, ಅಧಿಕಾರಿಗಳ ಹಂತದಲ್ಲಿ ಸಭೆ ನಡೆಸಿದೆ. ಎಡವಟ್ಟಿಗೆ ಕಾರಣ ಏನು ಎಂಬುದನ್ನು ಪತ್ತೆ ಹಚ್ಚಿದೆ. ಮುಂಬರುವ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗೆ ಪ್ರಶ್ನಪತ್ರಿಕೆ ಲೀಕ್ ತಡೆಯಲು ಮುಂದಾಗಿದೆ. ಪ್ರತಿಯೊಂದು ಕೊಠಡಿಗೂ ಸಿಸಿಟಿವಿ ಕ್ಯಾಮರ ಹಾಗೂ ತಾಲೂಕು ಮಟ್ಟದಲ್ಲಿ ನೋಡಲ್ ಕೇಂದ್ರ ವೆಬ್ ಕಾಸ್ಟಿಂಗ್ ಮತಷ್ಟು ಬಲಪಡಿಸಲು ಮುಂದಾಗಿದೆ.

Also Read  ವಿ.ವಿ. ನೇಮಕಾತಿ ಪರೀಕ್ಷೆ- ನಿಷೇಧಾಜ್ಞೆ ಜಾರಿ

  

error: Content is protected !!
Scroll to Top