ಐಪಿಎಲ್- ಮೆಗಾ ಹರಾಜಿಗೆ ಮುಹೂರ್ತ ಫಿಕ್ಸ್..!

(ನ್ಯೂಸ್ ಕಡಬ) newskadaba.com ಅ.22. ಈ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಮೆಗಾ ಹರಾಜಿಗಾಗಿ ದಿನಾಂಕ ಫಿಕ್ಸ್ ಆಗಿದ್ದು, ಅದರಂತೆ ಮುಂದಿನ ನವೆಂಬರ್ ತಿಂಗಳ 24 ಮತ್ತು 25 ರಂದು ಮೆಗಾ ಆಕ್ಷನ್ ಅರಬ್ ನಾಡಿನಲ್ಲಿ ನಡೆಯಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.


ಪ್ರಸ್ತುತ ವರದಿಯ ಪ್ರಕಾರ, ಐಪಿಎಲ್ ಮೆಗಾ ಹರಾಜು ಸೌದಿ ಅರೇಬಿಯಾದ ರಾಜಧಾನಿ ರಿಯಾದ್​​ನಲ್ಲಿ ನಡೆಯಲಿರುವುದಾಗಿ ತಿಳಿದುಬಂದಿದೆ. ಈ ಹಿಂದೆ ಸಿಂಗಾಪುರ್, ದುಬೈ ಅಥವಾ ಲಂಡನ್​ ನಲ್ಲಿ ಮೆಗಾ ಆಕ್ಷನ್ ನಡೆಯಲಿದೆ ಎಂದು ವರದಿಯಾಗಿತ್ತು. ಆದರೆ ಈಗ ಸೌದಿ ಅರೇಬಿಯಾದಲ್ಲಿ ಆಟಗಾರರ ಹರಾಜು ಪ್ರಕ್ರಿಯೆ ನಡೆಸಲು ಬಿಸಿಸಿಐ ಪ್ಲ್ಯಾನ್ ಮಾಡಿದೆ. ಇನ್ನು ಈ ಬಾರಿಯ ಮೆಗಾ ಹರಾಜಿನಲ್ಲಿ 600ಕ್ಕೂ ಅಧಿಕ ಆಟಗಾರರು ಕಾಣಿಸಿಕೊಳ್ಳಲಿದ್ದಾರೆ. ನವೆಂಬರ್ ಮೊದಲ ವಾರದಲ್ಲಿ ಆಟಗಾರರ ಹೆಸರು ನೋಂದಣಿ ನಡೆಯಲಿದ್ದು, ಇದಾದ ಬಳಿಕ ಆಟಗಾರರ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಹೀಗೆ ಶಾರ್ಟ್ ಲಿಸ್ಟ್​ನಲ್ಲಿ ಸ್ಥಾನ ಪಡೆದ ಆಟಗಾರರ ಹೆಸರು ಮಾತ್ರ ಹರಾಜಿನಲ್ಲಿ ಕಾಣಿಸಿಕೊಳ್ಳಲಿದೆ.

Also Read  ಮಂಗಳೂರು: ಖ್ಯಾತ ರಂಗ ಭೂಮಿ ನಿರ್ದೇಶಕ ಮಾಧವ ಜಪ್ಪು ಪಟ್ನ ನಿಧನ

ಹಾಗೆಯೇ ಮೆಗಾ ಹರಾಜಿಗೂ ಮುನ್ನ ಪ್ರತೀ ಫ್ರಾಂಚೈಸಿಗಳಿಗೆ 6 ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಹೀಗೆ ಉಳಿಸಿಕೊಂಡ ಆಟಗಾರರಿಗೆ ಒಟ್ಟು ಹರಾಜು ಮೊತ್ತದಿಂದ 79 ಕೋಟಿ ರೂ. ವ್ಯಯಿಸಬೇಕೆಂಬ ಷರತ್ತನ್ನು ವಿಧಿಸಲಾಗಿದೆ. ಒಂದು ವೇಳೆ 5 ಆಟಗಾರರನ್ನು ರಿಟೈನ್ ಮಾಡಿಕೊಂಡರೆ 75 ಕೋಟಿ ರೂ. ಖರ್ಚು ಮಾಡಬೇಕು ಎಂದು ತಿಳಿಸಲಾಗಿದೆ.

ಇನ್ನು ಈ ಬಾರಿಯ ಮೆಗಾ ಹರಾಜಿಗಾಗಿ ಒಟ್ಟು 120 ಕೋಟಿ ರೂ. ನಿಗದಿ ಮಾಡಲಾಗಿದ್ದು, ಪ್ರತೀ ಫ್ರಾಂಚೈಸಿಗಳು ಉಳಿಸಿಕೊಂಡ ಆಟಗಾರರ ಮೊತ್ತವನ್ನು ಒಟ್ಟು ಹರಾಜು ಮೊತ್ತದಿಂದ ಕಡಿತ ಮಾಡಲಾಗುತ್ತದೆ. ಅದರಂತೆ ಫ್ರಾಂಚೈಸಿಯೊಂದು 6 ಆಟಗಾರರನ್ನು ರಿಟೈನ್ ಮಾಡಿಕೊಂಡರೆ, 41 ಕೋಟಿ ರೂ.ನೊಂದಿಗೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದೆ.

error: Content is protected !!
Scroll to Top