ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ದೀಪಾವಳಿ ಹಬ್ಬಕ್ಕೆ ಗುಡ್ ನ್ಯೂಸ್; ಹುಬ್ಬಳ್ಳಿ- ಮಂಗಳೂರು ನಡುವೆ ವಿಶೇಷ ರೈಲು ಸಂಚಾರ – News Kadaba

ದೀಪಾವಳಿ ಹಬ್ಬಕ್ಕೆ ಗುಡ್ ನ್ಯೂಸ್; ಹುಬ್ಬಳ್ಳಿ- ಮಂಗಳೂರು ನಡುವೆ ವಿಶೇಷ ರೈಲು ಸಂಚಾರ

(ನ್ಯೂಸ್ ಕಡಬ) newskadaba.com ಅ.22. ದೀಪಾವಳಿ ಹಬ್ಬ ಮತ್ತು ವೀಕೆಂಡ್​ ಒಟ್ಟಿಗೆ ಬರುವ ಹಿನ್ನೆಲೆ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಲಿದೆ. ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ಮತ್ತು ಪ್ರಯಾಣಿಕರ ಮನವಿ ಮೇರೆಗೆ ನೈಋತ್ಯ ರೈಲ್ವೆಯು ಎಸ್​ಎಸ್​ಎಸ್ ಹುಬ್ಬಳ್ಳಿ – ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್​​ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಲಾಗಿದೆ ಎಂದು ನೈಋತ್ಯ ರೈಲ್ವೇ ವಲಯ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

 


ರೈಲು ಸಂಖ್ಯೆ 07311: ನವೆಂಬರ್​​ 2 ರಂದು ಶ್ರೀ ಸಿದ್ದಾರೂಢ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ರೈಲು ನಿಲ್ದಾಣದಿಂದ ಸಂಜೆ 4 ಗಂಟೆಗೆ ಹೊರಟು, ಮರುದಿನ ಬೆಳಗ್ಗೆ 11.25ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.

ರೈಲು ಸಂಖ್ಯೆ 07312: ನವೆಂಬರ್ 3 ರಂದು ಮಂಗಳೂರು ಜಂಕ್ಷನ್‌ನಿಂದ ಮಧ್ಯಾಹ್ನ 1 ಗಂಟೆಗೆ ಹೊರಟು, ಮರುದಿನ ನವೆಂಬರ್​ 4 ರಂದು ಬೆಳಗ್ಗೆ 7 ಗಂಟೆಗೆ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ತಲುಪಲಿದೆ.

ಎಲ್ಲೆಲ್ಲಿ ನಿಲುಗಡೆ?
ಈ ರೈಲು ಎರಡೂ ದಿಕ್ಕುಗಳಲ್ಲಿ ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್‌, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು ಮತ್ತು ಬಂಟ್ವಾಳ ನಿಲ್ದಾಣಗಳಲ್ಲಿ ನಿಲ್ಲುತ್ತದೆ.

ಈ ರೈಲು 1 ಎಸಿ ಟು ಟೈಯರ್ ಬೋಗಿಗಳು, 2 ಫಸ್ಟ್​​ ಎಸಿ ಕಮ್​​ ತ್ರಿ ಟೈಯರ್ ಬೋಗಿಗಳು​​, 3 ಎಸಿ ತ್ರಿ ಟೈಯರ್ ಬೋಗಿಗಳು, 5 ಸ್ವೀಪರ್ ಕ್ಲಾಸ್ ಬೋಗಿಗಳು, 2 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್/ ಬ್ರೇಕ್ ವ್ಯಾನ್ ಬೋಗಿಗಳು ಸೇರಿದಂತೆ 15 ಬೋಗಿಗಳನ್ನು ಹೊಂದಿದೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು-ಚೆನ್ನೈ ಎಗ್ಮೋರ್​​ ನಿಲ್ದಾಣಗಳ ನಡುವೆ ಎರಡು ಟ್ರಿಪ್​​ ವಿಶೇಷ ಎಕ್ಸ್​​ಪ್ರೆಸ್​​ (06209/06210)
ರೈಲು ಸಂಚಾರ

ರೈಲು ಸಂಖ್ಯೆ 06209: ಅಕ್ಟೋಬರ್ 30 ಮತ್ತು ನವೆಂಬರ್ 3 ರಂದು ಬೆಳಿಗ್ಗೆ 8:05ಕ್ಕೆ ಕೆಎಸ್‌ಆರ್ ಬೆಂಗಳೂರಿನಿಂದ ಹೊರಟು, ಅದೇ ದಿನ ಮಧ್ಯಾಹ್ನ 2:30ಕ್ಕೆ ಚೆನ್ನ ಎನ್ನೋರ್ ನಿಲ್ದಾಣವನ್ನು ತಲುಪಲಿದೆ.
ರೈಲು ಸಂಖ್ಯೆ 06210: ಚಿನ್ನೆ ಎಗೋರ್ ನಿಲ್ದಾಣದಿಂದ ಅಕ್ಟೋಬರ್ 30 ಮತ್ತು ನವೆಂಬರ್ 3 ರಂದು ಮಧ್ಯಾಹ್ನ 3:55ಕ್ಕೆ ಹೊರಟು, ಅದೇ ದಿನ ರಾತ್ರಿ 10:50ಕ್ಕೆ ಕೆಎಸ್‌ಆ‌ರ್ ಬೆಂಗಳೂರು ತಲುಪಲಿದೆ.

ಎಲ್ಲೆಲ್ಲಿ ನಿಲುಗಡೆ?
ಈ ರೈಲು ಎರಡೂ ದಿಕ್ಕುಗಳಲ್ಲಿ ಯಶವಂತಪುರ, ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ ಪೆಟ್ಟಿ, ಕಟ್ಟಾಡಿ, ಅರಕ್ಕೋಣಂ ಮತ್ತು ಪೆರಂಬೂರು ನಿಲ್ದಾಣಗಳಲ್ಲಿ ನಿಲ್ಲುತ್ತದೆ. ಈ ರೈಲು 1 ಎಸಿ ಟು ಟೈಯರ್, 1 ಎಸಿ ತ್ರಿ ಟೈಯರ್, 11 ಸ್ವೀಪರ್ ಕ್ಲಾಸ್, 4 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್ / ಬ್ರೇಕ್ ವ್ಯಾನ್ ಸೇರಿದಂತೆ 19 ಬೋಗಿಗಳನ್ನು ಒಳಗೊಂಡಿರುತ್ತದೆ.

ಪ್ರಯಾಣಿಕರು www.enquiry.indianrail.gov.i ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡುವ ಮೂಲಕ ಅಥವಾ NTES ಅಪ್ಲಿಕೇಶನ್ ಬಳಸಿ ಅಥವಾ 139 ಗೆ ಡಯಲ್ ಮಾಡುವ ಮೂಲಕ ರೈಲುಗಳ ಆಗಮನ/ನಿರ್ಗಮನ ಸಮಯ, ಇತರ ವಿವರಗಳನ್ನು ಪರಿಶೀಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Scroll to Top