ವಂಚನೆ ಪ್ರಕರಣ: ಆರೋಪಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

(ನ್ಯೂಸ್ ಕಡಬ) newskadaba.com  ಉಡುಪಿ, ಅ. 22.  ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ದುಬೈನ ಹೊಟೇಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ 2.5 ಕೋಟಿ ರೂ. ಅಧಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಳೆದ ವಾರ ಬಾರ್ಕೂರು ಮೂಲದ ನಾಗೇಶ್ ಪೂಜಾರಿ(31)ಯನ್ನು ಬಂಧಿಸಲಾಗಿತ್ತು. ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬ್ರಹ್ಮಾವರ ಜೆ.ಎಂ.ಎಫ್.ಸಿ. ನ್ಯಾಯಾಲಯ ತಿರಸ್ಕರಿಸಿದೆ.

ಆರೋಪಿಗೆ ಬ್ರಹ್ಮಾವರ ಜೆ.ಎಂ.ಎಫ್.ಸಿ. ನ್ಯಾಯಾಲಯ ನೀಡಿದ ಜಾಮೀನು ಆದೇಶವನ್ನು ರಾಜ್ಯ ಉಚ್ಚ ನ್ಯಾಯಾಲಯ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ಉಡುಪಿ ಸೆನ್ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆಗಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಆದೇಶವನ್ನು ಅ.21ಕ್ಕೆ ನಿಗದಿಪಡಿಸಲಾಗಿತ್ತು.

Also Read  ಬಿಸಿಯೂದಲ್ಲಿ ಹಾವು; ಬಿಸಿಯೂಟ ಸೇವಿಸಿದ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ...!!

 

 

 

error: Content is protected !!