ರಾಜ್ಯದಲ್ಲಿ 14 ಲಕ್ಷ ಮಂದಿಯ ಪಡಿತರ ಕಾರ್ಡ್​ ರದ್ದು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ. 22. ರಾಜ್ಯದಲ್ಲಿ ಸುಮಾರು 14 ಲಕ್ಷ ಬಿಪಿಎಲ್‌ ಪಡಿತರ ಕಾರ್ಡ್‌ಗಳು ಅನರ್ಹರ ಪಾಲಾಗಿದ್ದು, ಇವುಗಳನ್ನು ರದ್ದುಪಡಿಸಲಾಗುತ್ತದೆ ಎಂದು ಸಚಿವ ಕೆಎಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ ಅನರ್ಹರೂ ಕೂಡ ಬಿಪಿಎಲ್ ಪಡಿತರ ಕಾರ್ಡ್​ ಹೊಂದಿದ್ದು, ಸರ್ಕಾರದಿಂದ ಬಡವರಿಗೆ ದೊರೆಯುವ ಅನೇಕ ಸವಲತ್ತುಗಳನ್ನು ಪಡೆಯುತ್ತಿರುವುದನ್ನು ಗಮನಿಸಿರುವ ಆಹಾರ ಇಲಾಖೆ ಕಠಿಣ ಕ್ರಮ ಆರಂಭಿಸಿದೆ. ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿ ಅನರ್ಹರ ಕಾರ್ಡ್​​ಗಳನ್ನು ರದ್ದುಗೊಳಿಸಲಾಗುತ್ತಿದೆ. ಇದೀಗ ಅಧಿಕಾರಿಗಳು 13.87 ಲಕ್ಷ ಅನರ್ಹ ಕಾರ್ಡ್‌ಗಳನ್ನು ಗುರುತಿಸಿದ್ದು, ಅವುಗಳಲ್ಲಿ 3.64 ಲಕ್ಷ ಕಾರ್ಡ್‌ಗಳನ್ನು ರದ್ದುಗೊಳಿಸಲಾಗಿದೆ ಎಂದಿದ್ದಾರೆ.

Also Read  ಉಪ್ಪಿನಂಗಡಿಗೆ ಗೃಹ ರಕ್ಷಕ ದಳದ ಪ್ರವಾಹ ರಕ್ಷಣಾ ತಂಡ ಆಗಮನ

 

 

error: Content is protected !!
Scroll to Top