ರಾಜ್ಯ ಹೆದ್ದಾರಿ ರಸ್ತೆಯುದ್ದಕ್ಕೂ ಹೊಂಡಗುಂಡಿ- ಸಾರ್ವಜನಿಕರ ಆಕ್ರೋಶ

(ನ್ಯೂಸ್ ಕಡಬ) newskadaba.com  ಡುಪಿ, ಅ. 22. ಇಲ್ಲಿನ ಕಟಪಾಡಿ ಶಿರ್ವ ರಾಜ್ಯ ಹೆದ್ದಾರಿ ರಸ್ತೆಯುದ್ದಕ್ಕೂ ಹೊಂಡಗುಂಡಿಯಾಗಿದ್ದು, ರಸ್ತೆಯಲ್ಲಿ ಪ್ರತಿನಿತ್ಯ ವಾಹನ ಸವಾರರು ಪರದಾಡುವಂತಾಗಿದೆ.

ಕಟಪಾಡಿ ಕುರ್ಕಾಲು ಶಂಕರಪುರದಿಂದ ಶಿರ್ವ ಸಂಪರ್ಕ ರಸ್ತೆ ಸುಮಾರು ತಿಂಗಳುಗಳಿಂದ ಈ ರಸ್ತೆ ಹದಗೆಟ್ಟಿದ್ದು ವಾಹನ ಸವಾರರಿಗೆ ದಿನನಿತ್ಯ ಕಿರಿಕಿರಿ ಉಂಟಾಗುತ್ತಿದೆ. ಈ ಬಗ್ಗೆ ಮನವಿ ಮಾಡಿದರೂ ಏನೂ ಪ್ರಯೋಜನ ಆಗಿಲ್ಲ. ದಪ್ಪ ಚರ್ಮದ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ. ಜೊತೆಗೆ ಹೊಂಡ ಮುಚ್ಚುವ ಕಾರ್ಯಕ್ಕೂ ಮುಂದಾಗುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಬಾಳೆ ಗೊನೆಬಿಡುವ ಮೊದಲು ಲೋಕೋಪಯೋಗಿ ಇಲಾಖೆ ಇನ್ನಾದರೂ ಎಚ್ಚೆತ್ತುಕೊಂಡು ಈ ರಸ್ತೆಯನ್ನು ರಿಪೇರಿ ಮಾಡಬೇಕಾಗಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Also Read  ನೇತ್ರಾವತಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

 

error: Content is protected !!
Scroll to Top