ಉಡುಪಿ: ಯುವಕನ ಕತ್ತು ಸೀಳಿ ಹತ್ಯೆ

(ನ್ಯೂಸ್ ಕಡಬ) newskadaba.com .21 ಉಡುಪಿ:  ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಗೊಬ್ಬ  ತನ್ನ ಸ್ನೇಹಿತನನ್ನೇ ಕತ್ತು ಸೀಳಿ ಕೊಲೆಗೈದ ಘಟನೆ ಉಡುಪಿ ಹಳೆ ಕೆಎಸ್ಸಾರ್ಟಿಸಿ ನಿಲ್ದಾಣದ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ(32) ಕೊಲೆಯಾದ ವ್ಯಕ್ತಿ. ಈತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್ ಕೊಲೆ ಆರೋಪಿ . ವಿಪರೀತ ಮದ್ಯಪಾನ ಮಾಡಿದ್ದರೆನ್ನಲಾದ ಇವರಿಬ್ಬರು ಇಂದು ಬೆಳಗ್ಗೆ ಜಗಳ ಮಾಡಿಕೊಂಡಿದ್ದಾರೆ. ಗಲಾಟೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಆರೋಪಿ ಈರಣ್ಣ ಹರಿತವಾದ ಚೂರಿಯಿಂದ ಪ್ರಶಾಂತ್ ರವರ ಕತ್ತು ಸೀಳಿದ್ದಾನೆ. ಗಂಭೀರವಾಗಿ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

Also Read  ಬಂಟ್ವಾಳ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ..! ➤ ಶಂಕೆ ಹಿನ್ನೆಲೆ ಪತಿಯಿಂದ ಠಾಣೆಗೆ ದೂರು

error: Content is protected !!
Scroll to Top