ಮಾಣಿ ಬಾಲವಿಕಾಸ ಶಾಲೆಯ ಮುಖ್ಯ ಶಿಕ್ಷಕಿ ಸುಪ್ರಿಯಾವರಿಗೆ ರಾಜ್ಯ ಮಟ್ಟದ ‘ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಅ. 22. ಅನುದಾನರಹಿತ ಖಾಸಗಿ ಶಾಲೆಗಳ ಸಂಘ (RUPSA) ನೀಡುವ ರಾಜ್ಯ ಮಟ್ಟದ ‘ವಿದ್ಯಾರತ್ನ’ ಪ್ರಶಸ್ತಿಗೆ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಸುಪ್ರಿಯಾ ಡಿ. ಭಾಜನರಾಗಿದ್ದಾರೆ.

ಅಕ್ಟೋಬರ್ 21ರಂದು ಬೆಂಗಳೂರಿನ ಜುಬಿಲಿ ಇಂಟರ್ ನ್ಯಾಶನಲ್ ಸ್ಕೂಲ್ ನಲ್ಲಿ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪರ ಉಪಸ್ಥಿತಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸುಪ್ರಿಯಾ ಪ್ರಶಸ್ತಿ ಸ್ವೀಕರಿಸಿದರು. ಇವರು ಮಂಗಳೂರಿನ ಜೆಪ್ಪು ನಿವಾಸಿ, ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ವಸಂತ ಕುಮಾರ್ ರ ಪತ್ನಿ.

Also Read  ಮುಂದುವರಿದ ಮಳೆಯ ಅಬ್ಬರ ➤ ಆಂಧ್ರಪ್ರದೇಶ,ತೆಲಂಗಾಣದಲ್ಲಿ ಜನಜೀವನ ಅಸ್ಥವ್ಯಸ್ಥ

 

error: Content is protected !!
Scroll to Top