ನಟ ದರ್ಶನ್ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com .22 ಬಳ್ಳಾರಿ : ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಬಳ್ಳಾರಿ ಜೈಲು ಪಾಲಾಗಿರುವ ನಟ ದರ್ಶನ್ ತೀವ್ರ ಬೆನ್ನು ನೋವಿನ ಸಮಸ್ಯೆ ಹಿನ್ನೆಲೆಯಲ್ಲಿ ಬಳ್ಳಾರಿಯ ವಿಮ್ಸ್  ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್‌ಗೆ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ವೈದ್ಯರು ಸೂಚನೆ ಕೊಟ್ಟಿದ್ದರು. ವೈದ್ಯರ ಸಲಹೆಯಂತೆ ಬಳ್ಳಾರಿಯಲ್ಲಿ ನಟ ದರ್ಶನ್ ಎಂಆರ್ ಐ ಸ್ಕ್ಯಾನಿಂಗ್ ಮಾಡಿಸಲು ಒಪ್ಪಿಕೊಂಡಿದ್ದಾನೆ. ನಟ ದರ್ಶನ್‌ ಬೆನ್ನು ನೋವಿನಿಂದ ಸರಿಯಾಗಿ ನಿದ್ದೆ ಮಾಡದೆ ಸೊರಗಿ ಹೋಗಿದ್ದಾನೆ ಎಂದು ಮೂಲಗಳು ತಿಳಿಸಿವೆ.ಬೆಂಗಳೂರು ಜೈಲಿನಲ್ಲಿದ್ದಾಗಲೇ ನಟ ದರ್ಶನ್‌ ಗೆ ಬೆನ್ನು ನೋವಿನ ಸಮಸ್ಯೆ ಕಂಡು ಬಂದಿತ್ತು. ಅದರಂತೆ ವಿಮ್ಸ್ ಆಸ್ಪತ್ರೆಯ ವೈದ್ಯರು ಜೈಲಿಗೆ ಭೇಟಿ ನೀಡಿ ನಟ ದರ್ಶನ್ ಆರೋಗ್ಯವನ್ನು ತಪಾಸಣೆ ಮಾಡಿದ್ದರು. ಈ ವೇಳೆ ಆಸ್ಪತ್ರೆಗೆ ದಾಖಲಾಗಿ ಸ್ಕ್ಯಾನಿಂಗ್ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ್ದರು. ಹೀಗಾಗಿ ದರ್ಶನ್‌ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಾಡಿಸಿಕೊಂಡಿದ್ದಾನೆ.

Also Read  ನೂಜಿಬಾಳ್ತಿಲ: ಪುತ್ತೂರು ಧರ್ಮಪ್ರಾಂತ್ಯದ 11ನೇ ವಾರ್ಷಿಕೋತ್ಸವ

ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 28ಕ್ಕೆ ಮುಂದೂಡಿದೆ. ಜೈಲಾಧಿಕಾರಿಗಳಿಂದ ದರ್ಶನ್ ಬೆನ್ನು ನೋವಿನ ಬಗ್ಗೆ ವೈದ್ಯರು ನೀಡಿರುವ ವರದಿ ನೀಡುವಂತೆ ಹೈಕೋರ್ಟ್ ಕೇಳಿದ್ದು, ಅರ್ಜಿ ವಿಚಾರಣೆಯನ್ನು ಅಕ್ಟೋಬರ್‌ 28ಕ್ಕೆ ಮುಂದೂಡಿಕೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

error: Content is protected !!
Scroll to Top