ಬಾಯಿಯ ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡಿ- ಡಾ. ಚೂಂತಾರು

(ನ್ಯೂಸ್ ಕಡಬ) newskadaba.com ಅ.23.  ಬಾಯಿ ಎನ್ನುವುದು ನಮ್ಮ ದೇಹದ ಆರೋಗ್ಯದ ಬಗ್ಗೆ ಮಾಹಿತಿ ನೀಡುವ ಕೇಂದ್ರವಾಗಿರುತ್ತದೆ. ಹಲ್ಲು ನೋವಿನ ಹೊರತಾದ ಹತ್ತಾರು ರೋಗಗಳು ಪ್ರಕಟಗೊಳ್ಳುತ್ತದೆ. ರಕ್ತಹೀನತೆ, ವಿಟಮಿನ್ ಕೊರತೆ, ಲಿವರ್ ಸಮಸ್ಯೆ, ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಹಿಡಿದು ರಕ್ತದ ಕ್ಯಾನ್ಸರ್ ವರೆಗಿನ ಎಲ್ಲ ಮಾಹಿತಿಗಳು ಆರಂಭಿಕ ಹಂತದಲ್ಲಿಯೇ ಬಾಯಿಯಲ್ಲಿ ಕಂಡು ಬರುತ್ತದೆ. ದಂತ ವೈದ್ಯರು ಇದನ್ನು ಗುರುತಿಸಿ ತಿಳಿಹೇಳಿ ರೋಗಿಯನ್ನು ಜಾಗೃತಿಗೊಳಿಸುವ ಬಹುದೊಡ್ಡ ಜವಾಬ್ದಾರಿ ಹೊಂದಿರುತ್ತದೆ. ಈ ಸಾಮಾಜಿಕ  ಹೊಣೆಗಾರಿಕೆಯನ್ನು ಅರಿತು ನಿಭಾಯಿಸಿದಲ್ಲಿ ಸುಂದರ ಸಮೃದ್ಧ, ಸುದೃಢ ಭಾರತವನ್ನು ಕಟ್ಟಲು ಸಾಧ್ಯವಿದೆ ಎಂದು ಸುರಕ್ಷಾ ದಂತ ಚಿಕಿತ್ಸಾಲಯದ ಬಾಯಿ, ಮುಖ ಮತ್ತು ದವಡೆ  ಶಸ್ತ್ರಚಿಕಿತ್ಸಕ ಹಾಗೂ ಖ್ಯಾತ ದಂತ ವೈದ್ಯರಾದ ಡಾ|| ಮುರಲೀ ಮೋಹನ್ ಚೂಂತಾರು ಅಭಿಪ್ರಾಯಪಟ್ಟರು.

ಅವರು ಮಂಗಳವಾರದಂದು ತಲಪಾಡಿ ಸಮೀಪದ ನಾರ್ಲಪಡೀಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನದ ವತಿಯಿಂದ ನಡೆದ ದಂತ ಆರೋಗ್ಯ ಮಾಹಿತಿ ಶಿಬಿರದಲ್ಲಿ ಮಾತನಾಡಿದರು. 35 ಮಕ್ಕಳಿಗೆ ಉಚಿತವಾಗಿ ಟೂತ್ ಪೇಸ್ಟ್ ಮತ್ತು ಟೂತ್ ಬ್ರಷ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾದ್ಯಾಯಿನಿ ಶ್ರೀಮತಿ ಜಯಂತಿ, ಶಿಕ್ಷಕಿಯರಾದ ಶ್ರೀಮತಿ ಇಂದಿರಾ, ಜಾನೆಟ್ ಡಿಮೆಲ್ಲೋ ರೇಖಾ ಮೊದಲಾದವರು ಉಪಸ್ಥಿತರಿದ್ದರು.

error: Content is protected !!

Join the Group

Join WhatsApp Group