ಅಬಕಾರಿ ಕಾರ್ಯಾಚರಣೆ: ಮದ್ಯ, ಗಾಂಜಾ ವಶ

crime, arrest, suspected

(ನ್ಯೂಸ್ ಕಡಬ) newskadaba.com ಅ.23. ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ/ಸಾಗಾಟ ಚಟುವಟಿಕೆಗಳನ್ನು ತಡೆಗಟ್ಟುವ ಸಂಬಂಧ ಅಬಕಾರಿ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ತೀವ್ರ ಕಾರ್ಯಾಚರಣೆ ನಡೆಸಿ ಅಕ್ಟೋಬರ್ ತಿಂಗಳಿನಲ್ಲಿ ಒಟ್ಟು 5.051 ಗಾಂಜಾ ಹಾಗೂ ಒಟ್ಟು 9.460 ಗ್ರಾಂ MDMA (Methylene dioxy- Methyl amphetamine) ಜಪ್ತಿ ಮಾಡಿ ಪ್ರಕರಣಗಳನ್ನು ದಾಖಲಿಸಲಾಗಿದೆ.

ಅಕ್ಟೋಬರ್ 18ರಂದು ಕೆ.ಎಸ್.ಬಿ.ಸಿ.ಎಲ್ ಡಿಪೊ-2, ಬೈಕಂಪಾಡಿ, ಇಲ್ಲಿಗೆ ಹಾಸನದಿಂದ ಒಟ್ಟು 1100 ಪೆಟ್ಟಿಗೆ (10,680 ಲೀ) ಬಿಯರ್ ಅವಧಿ ಮೀರಿದ ರಹದಾರಿ ಪತ್ರದೊಂದಿಗೆ ಲಾರಿಯ ಮೂಲಕ ಸರಬರಾಜಾಗಿದ್ದು, ಅವಧಿ ಮೀರಿದ ರಹದಾರಿ ಪತ್ರದೊಂದಿಗೆ ಬಿಯರ್ ಸರಬರಾಜು ಮಾಡಿ ಅಬಕಾರಿ ನಿಯಮಗಳನ್ನು ಉಲ್ಲಂಘಿಸಿರುವುದನ್ನು ಪತ್ತೆಹಚ್ಚಿ ವಾಹನ ಮತ್ತು ಬಿಯರನ್ನು ಜಪ್ತಿಪಡಿಸಿ ಕೇಸು ದಾಖಲಿಸಲಾಗಿದೆ.

Also Read  ಆನ್ಲೈನ್ ನಲ್ಲಿ 5.90 ಲಕ್ಷ ವಂಚನೆ..! - ದೂರು ದಾಖಲು

ಅಕ್ಟೋಬರ್ 14ರಂದು ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಗೂನಡ್ಕ ಎಂಬಲ್ಲಿ ಪಯಸ್ವಿನಿ ರಿಫ್ರೆಶ್ಮೆಂಟ್ ಆಂಡ್ ಕೂಲ್ ಜೋನ್ ಎಂಬ ಅಂಗಡಿಯಲ್ಲಿ ಹೋಮ್ ಮೇಡ್ ವೈನ್ ನ್ನು ಅಕ್ರಮವಾಗಿ ದಾಸ್ತಾನು ಹೊಂದಿ ಮಾರಾಟ ಮಾಡುತ್ತಿರುವುದನ್ನು ಪತ್ತೆಹಚ್ಚಿ ಒಟ್ಟು 111.750 ಲೀ ವೈನ್  ಜಫ್ತಿಪಡಿಸಿ ಅಬಕಾರಿ ಇಲಾಖೆಯ ಅಧಿಕಾರಿ ಪ್ರಕರಣವನ್ನು ದಾಖಲಿಸಲಾಗಿದೆ.

ಅಕ್ಟೋಬರ್ 20 ರಂದು ಬೈಕಂಪಾಡಿಯಿಂದ ಬಜಪೆಗೆ ಹೋಗುವ ರಸ್ತೆಯ ಕರ್ಕೆರಾ ಮೂಲ ಸ್ಥಾನದ ಬಳಿ ಯಾವುದೇ ರಹದಾರಿಯಿಲ್ಲದೇ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿರುವುದನ್ನು ಪತ್ತೆಹಚ್ಚಿ ಒಟ್ಟು 3.690 ಲೀ ಮದ್ಯ ಹಾಗೂ ವಾಹನವನ್ನು ಜಪ್ತಿಪಡಿಸಿ ಪ್ರಕರಣ ದಾಖಲಿಸಲಾಗಿದೆ.

ಅಕ್ಟೋಬರ್‍ ನಲ್ಲಿ ಒಟ್ಟು 19.170 ಮದ್ಯ ಹಾಗೂ 111.750 ವೈನ್ ಅನ್ನು ಅಬಕಾರಿ ಇಲಾಖೆಯಿಂದ ಜಪ್ತಿಪಡಿಸಲಾಗಿದೆ ಎಂದು ಅಬಕಾರಿ ಉಪ ಆಯುಕ್ತ ಟಿ.ಎಂ. ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top