ಸಿಪಿವೈ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತ ಸೇರ್ಪಡೆ…!

(ನ್ಯೂಸ್ ಕಡಬ) newskadaba.com ಅ.23. ಸಿಪಿ ಯೋಗೇಶ್ವರ್ ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಡಿಸಿಎಂ ಡಿಕೆಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಒಂದುಕಡೆ ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರುತ್ತಿದ್ದು, ಇದರ ಬೆನ್ನಲ್ಲೇ ಎನ್‌ಡಿಎ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಗಳಿಗೆ ಸಡ್ಡು ಹೊಡೆದಿದ್ದಾರೆ.

ಈ ಮೂಲಕ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಿ.ಪಿ.ಯೊಗೇಶ್ವರ್ ಸ್ಪರ್ಧೆ ಬಹುತೇಕ ಖಚಿತವಾದಂತಾಗಿದೆ. ಬುಧವಾರದಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿ.ಪಿ.ಯೋಗೇಶ್ವರ್‌ ಅವರಿಗೆ ಪಕ್ಷದ ಬಾವುಟ, ಶಾಲು ಹಾಕುವ ಮೂಲಕ ಕಾಂಗ್ರೆಸ್‌ ಪಕ್ಷಕ್ಕೆ ಬರಮಾಡಿಕೊಂಡರು.

Also Read  ಐಸ್ ಕ್ರೀಮ್ ದಾಸ್ತಾನು ಕೇಂದ್ರದಲ್ಲಿ ಭಾರೀ ಬೆಂಕಿ ಅವಘಡ..!   ➤ ಅಪಾರ ನಷ್ಟ

ಬಳಿಕ ಮಾತನಾಡಿದ ಸಿ.ಪಿ.ಯೋಗೇಶ್ವರ್‌, ನಾನು ಸ್ವಯಂ ಪ್ರೇರಿತನಾಗಿ ಯಾವುದೇ ಒತ್ತಡ, ಷರತ್ತುಗಳಿಲ್ಲದೇ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗುತ್ತಿದ್ದೇನೆ. ನೇರವಾಗಿ ಡಿ.ಕೆ.ಶಿವಕುಮಾರ್‌ ನಿವಾಸಕ್ಕೆ ಬಂದು ಚರ್ಚಿಸಿ, ಸಿಎಂ ಅವರನ್ನು ಭೇಟಿಯಾಗಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ. ಮಲ್ಲಿಕಾರ್ಜುನ್‌ ಖರ್ಗೆ ಅವರೂ ಮಾತನಾಡಿ ಹಾರೈಸಿದ್ದಾರೆ. ನನ್ನ ರಾಜಕೀಯ ಜೀವನ ಶುರು ಮಾಡಿದ ಪಕ್ಷಕ್ಕೆ ಮತ್ತೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿದರು.

error: Content is protected !!
Scroll to Top