ಸರ್ವರ್ ಸಮಸ್ಯೆಯಿಂದ ಅಕ್ಕಿ ಪಡೆಯಲು ಪರದಾಟ – ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

(ನ್ಯೂಸ್ ಕಡಬ) newskadaba.com ಯಾದಗಿರಿ, ಅ.23. ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಪಡೆಯಲು ಪಡಿತರು ಪರದಾಡುವಂತಹ ಸ್ಥಿತಿ ಎದುರಾಗಿದ್ದು, ಸರ್ವರ್ ಸಮಸ್ಯೆಯಿಂದಾಗಿ ಕಳೆದ ಒಂದು ವಾರದಿಂದ ಪರದಾಡುತ್ತಿದ್ದಾರೆ.

ನ್ಯಾಯಬೆಲೆ ಅಂಗಡಿಯಲ್ಲಿ ಜನರು ಅಕ್ಕಿ ಪಡೆಯಲು ಪರದಾಡುತ್ತಿದ್ದು, ಸರ್ವರ್ ಸಮಸ್ಯೆಯಿಂದಾಗಿ ಗ್ರಾಹಕರ ಬೆರಳಚ್ಚನ್ನು ವೆಬ್‌ಸೈಟ್ ಸ್ವೀಕರಿಸುತ್ತಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಸರ್ವರ್ ಸಿಗದ ಹಿನ್ನೆಲೆ ಯಾದಗಿರಿ ಜಿಲ್ಲಾ ಕೇಂದ್ರಕ್ಕೆ ಜನರು ಆಗಮಿಸುತ್ತಿದ್ದಾರೆ. ಆದರೆ ಅಲ್ಲಿಯೂ ಜನರಿಗೆ ಅಕ್ಕಿ ಸಿಗುತ್ತಿಲ್ಲ. ಕೂಲಿ ಕೆಲಸ ಬಿಟ್ಟು ಪಡಿತರ ಧಾನ್ಯ ಪಡೆಯಲು ಗ್ರಾಹಕರು ಹರಸಾಹಸಪಡುತ್ತಿದ್ದಾರೆ. ಈ ಸಮಸ್ಯೆಯಿಂದಾಗಿ ಊಟಕ್ಕೆ ಅಕ್ಕಿ ಇಲ್ಲದೇ ಜನರು ಪರದಾಟ ನಡೆಸುತ್ತಿದ್ದಾರೆ.

Also Read  ಸರಸ್ವತೀ ವಿದ್ಯಾಲಯ ಕಡಬ- ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

 

error: Content is protected !!
Scroll to Top