(ನ್ಯೂಸ್ ಕಡಬ) newskadaba.com ಅ.24. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ಅ. 22ರಂದು ನಡೆದ ವಿಧಾನ ಪರಿಷತ್ ಉಪಚುನಾವಣೆಯ ಮತ ಎಣಿಕೆ ಕಾರ್ಯವು ಇಂದು ಬೆಳಗ್ಗೆ 8 ಗಂಟೆಯಿಂದ ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಆರಂಭಗೊಂಡಿದೆ.
ಪ್ರಾರಂಭದಲ್ಲಿ ಮತಪೆಟ್ಟಿಗೆಗಳನ್ನು ತೆರೆದು ಮೊದಲ ಹಂತದ ಒಟ್ಟು ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಲಾಗುವುದು. ನಂತರ ನಿಗದಿತ ಕೋಟಾವನ್ನು ಮೊದಲ ಪ್ರಾಶಸ್ತ್ಯದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆ ಮಾಡಿ, ಘೋಷಣೆ ಮಾಡಲಾಗುವುದು ಎಂದು ಹೇಳಲಾಗಿದೆ.
ಕೇಂದ್ರ ಚುನಾವಣಾ ವೀಕ್ಷಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದಾರೆ .