ಮೈಸೂರು ವಿಭಾಗ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಅ.24. ಜವಾಹರಲಾಲ್ ನೆಹರು ತಾರಾಲಯ, ಬೆಂಗಳೂರು ಇವರು ರಾಜ್ಯ ಮಟ್ಟದಲ್ಲಿ ಆಯೋಜಿಸಿರುವ ಕನ್ನಡದಲ್ಲಿ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯ ಅಂಗವಾಗಿ ಮೈಸೂರು ವಿಭಾಗ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯನ್ನು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿತ್ತು.

ತಾರಾಲಯದ ನಿರ್ದೇಶಕ ಡಾ. ಬಿ ಆರ್. ಗುರುಪ್ರಸಾದ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ರಸಪ್ರಶ್ನೆ ಸ್ಪರ್ಧೆಯ ಉದ್ದೇಶಗಳನ್ನು ವಿವರಿಸಿದರು. ಈ ಸ್ಪರ್ಧೆ ವಿದ್ಯಾರ್ಥಿಗಳಲ್ಲಿ ವಿಷಯವನ್ನು ಅರ್ಥಮಾಡಿಕೊಳ್ಳಲು ಸಹಾಯಕ ಆತ್ಮವಿಶ್ವಾಸವನ್ನು ಬೆಳೆಸುವ ಉತ್ತಮ ಸಾಧನ ಎಂದು ಹೇಳಿ ಪ್ರೌಢಶಾಲಾ ಮಟ್ಟದಲ್ಲಿಯೇ ವಿದ್ಯಾರ್ಥಿಗಳು ಪಠ್ಯಪುಸ್ತಕದ ಹೊರಗೆ ಇರುವ ವಿದ್ಯಮಾನಗಳನ್ನು ತಿಳಿಯುವ ಪ್ರಯತ್ನ ಮಾಡಬೇಕೆಂದರು. ಅಧ್ಯಕ್ಷತೆಯನ್ನು ವಹಿಸಿದ್ದ ಕೇಂದ್ರದ ನಿರ್ದೇಶಕ ಡಾ. ಕೆ. ವಿ. ರಾವ್ ವಿಭಾಗ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯನ್ನು ಮಂಗಳೂರಿನಲ್ಲಿ ಏರ್ಪಡಿಸುವ ನಿರ್ಧಾರಕ್ಕೆ ತಮ್ಮ ಹರ್ಷ ವ್ಯಕ್ತಪಡಿಸಿದರು ವಿದ್ಯಾರ್ಥಿಗಳ ಜ್ಞಾನರ್ಜನೆಗೆ ಪೂರಕವಾಗುವ ಎಲ್ಲ ಚಟುವಟಿಕೆಗಳನ್ನು ಕೇಂದ್ರವು ಫ್ರೋತ್ಸಾಹಿಸಲಿದೆ ಹಾಗೂ ಎಲ್ಲ ಅನುಕೂಲತೆಗಳನ್ನು ಒದಗಿಸುವ ಭರವಸೆ ಇತ್ತರು.

Also Read  ದೇವಸ್ಥಾನ ವ್ಯವಸ್ಥಾಪನಾ ಸಮಿತಿ ರಚನೆ ➤ ಅರ್ಜಿ ಆಹ್ವಾನ

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲಾ ಮಟ್ಟದ ಸ್ಪರ್ಧೆಗಳಿಂದ ವಲಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ಸ್ಥಳೀಯ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಕೇಂದ್ರದ ಗ್ಯಾಲರಿಗಳ ವೀಕ್ಷಣೆ, ತಾರಾಲಯ ಪ್ರದರ್ಶನಗಳನ್ನು ಏರ್ಪಡಿಸಲಾಗಿತ್ತು.

error: Content is protected !!
Scroll to Top