ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಅ.24. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಮಂಗಳೂರಿನ ಮ್ಯಾಪ್ಸ್ ಕಾಲೇಜಿನಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ರಾಣಿ ಚೆನ್ನಮ್ಮರ ಭಾವಚಿತ್ರಕ್ಕೆ ಹೂವು ಹಾಕಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಪತ್ರಾಂಕಿತ ಸಹಾಯಕರು ಹಾಗೂ ಬರಹಗಾರರಾದ ಬೆನೆಟ್ ಜಿ. ಅಮ್ಮಣ್ಣ ಮಾತನಾಡಿ, ಕಿತ್ತೂರು ರಾಣಿ ಚೆನ್ನಮ್ಮ 200 ವರ್ಷಗಳ ಹಿಂದೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ದೇಶಕ್ಕಾಗಿ ಪ್ರಾಣ ತೆತ್ತ ವೀರ ವನಿತೆ ಎಂದು ಇತಿಹಾಸದಲ್ಲಿ ಅಮರರಾಗಿದ್ದಾರೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಶ್ರುತಿ ಶೆಟ್ಟಿ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಪ್ರೇರಕದಾಯಕವಾಗಿದ್ದು, ಸ್ವಾತಂತ್ರ್ಯ ಹೋರಾಟಗಾರರು ಸಲ್ಲಿಸಿದ ಸೇವೆ ಈ ಭೂಮಿಯಲ್ಲಿ ಅಜರಾಮರವಾಗಿ ಉಳಿಯುತ್ತದೆ ಎಂದರು.

Also Read  ಮರ್ಧಾಳ: ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿದ ಕಾರು ➤ ರಬ್ಬರ್ ಶೀಟ್ ಮಾಡುವ ಯಂತ್ರಕ್ಕೆ ಹಾನಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಪ್ರಾಸ್ತಾವಿಕ ಮಾತನಾಡಿದರು, ಉಪ ಪ್ರಾಂಶುಪಾಲ ಡಾ.ಪ್ರಾಭಾಕರ್ ನೀರ್‍ಮಾರ್ಗ ಸ್ವಾಗತಿಸಿದರು. ವಿದ್ಯಾರ್ಥಿನಿ ಕು.ಮನ್ವಿತಾ ವಂದಿಸಿದರು. ಭಾಗವಹಿಸಿದವರಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ, ರಾಜ್ಯ ಮಟ್ಟದ ಸ್ಪರ್ಧೆಗೆ ಎರಡು ತಂಡಗಳನ್ನು ಆಯ್ಕೆ ಮಾಡಲಾಯಿತು. ಕೇಂದ್ರದ ಕ್ಯುರೇಟರ್ ಜಗನ್ನಾಥ್ ಕಾರ್ಯಕ್ರಮ ನಿರ್ವಹಿಸಿದರು.

error: Content is protected !!
Scroll to Top