“ಸಾಹಸ ಪ್ರವಾಸೋದ್ಯಮ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಕುತ್ಲೂರಿನ ಮೂವರಿಗೆ ಗೌರವ ಸಮರ್ಪಣೆ

(ನ್ಯೂಸ್ ಕಡಬ) newskadaba.com ಅ.24. ಅಂತರಾಷ್ಟ್ರೀಯ ಪ್ರವಾಸೋದ್ಯಮ ದಿನದ ಅಂಗವಾಗಿ ಕೇಂದ್ರ ಸರಕಾರ ಮತ್ತು ಕೇಂದ್ರ ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ಅತ್ಯುತ್ತಮ ಪ್ರವಾಸಿ ತಾಣಗಳು ಸ್ಪರ್ಧೆಯಲ್ಲಿ “ಸಾಹಸ ಪ್ರವಾಸೋದ್ಯಮ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಕುತ್ಲೂರು ಗ್ರಾಮದ ಪ್ರತಿನಿಧಿಗಳಾಗಿದ್ದ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ಇವರಿಗೆ ಸಪ್ಟೆಂಬರ್‌ 27 ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾನ್ಯ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಘನ ಉಪಸ್ಥಿತಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರು ಮತ್ತು ಇತರ ಗಣ್ಯರು ಪ್ರಶಸ್ತಿ ನೀಡಿ ಅಭಿನಂದಿಸಿದ್ದರು.

ಈ ಸಾಧನೆಗೆ ಗೌರವ ಸಲ್ಲಿಸುವ ಸಲುವಾಗಿ ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಮಂಗಳೂರಿನ “ದಿ ಓಶಿಯನ್ ಪರ್ಲ್” ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮದ ಪ್ರತಿನಿಧಿಗಳಾಗಿ ಭಾಗವಹಿದ್ದ ಸುಂದರ್ ಕೋಟ್ಯಾನ್, ಸಂತೋಷ್ ಮೆಲ್ವಿನ್ ಮತ್ತು ಶಿವರಾಜ್ ಅಂಚನ್ ಇವರನ್ನು ಕರ್ನಾಟಕ ಸರಕಾರದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾದ ಶ್ರೀ ರಾಜೇಂದ್ರ ಕೆ ವಿ, ದ.ಕ. ಜಿಲ್ಲಾಧಿಕಾರಿ ಶ್ರೀ ಮುಲ್ಲೈ ಮುಗಿಲನ್, ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಸೇರಿದಂತೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಗೌರವಿಸಿ ಅಭಿನಂದಿಸಿದರು. ಚುಣಾವಣಾ ನೀತಿಸಂಹಿತೆ ಜಾರಿಯಲ್ಲಿ ಇರುವ ಕಾರಣ ಜನಪ್ರತಿನಿಧಿಗಳಿಗೆ ಭಾಗವಹಿಸಲು ಅವಕಾಶ ಇರಲಿಲ್ಲ.

Also Read  ಸಿಎಂ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರಿನ ಅರುಣ್ ಫುರ್ಟಾಡೊ ನೇಮಕ

error: Content is protected !!
Scroll to Top