17ರ ವಯೋಮಾನದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ – ಕಡಬ ಸರಸ್ವತೀ ವಿದ್ಯಾಲಯದ ನಿಶ್ವಿತ್. ಪಿ ಪ್ರಥಮ

(ನ್ಯೂಸ್ ಕಡಬ) newskadaba.com ಅ.24. ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ, ಇದರ ವತಿಯಿಂದ ಮಧ್ಯಪ್ರದೇಶದ ದೇವಾಸ್‍ನಲ್ಲಿ ನಡೆದ 17ರ ವಯೋಮಾನದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ನಿಶ್ವಿತ್. ಪಿ, ಸತತ ಎರಡನೇ ಬಾರಿಗೆ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಈತ ಮುಂದೆ ದೆಹಲಿಯಲ್ಲಿ ನಡೆಯತಕ್ಕಂತಹ SGFI ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾನೆ. ಇವನು ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಪೊನೈತ್ತೂರಿನ ಸುರೇಶ ಮತ್ತು ಚಂದ್ರಾವತಿ ದಂಪತಿಗಳ ಪುತ್ರ. ಇವರಿಗೆ ಸಂಸ್ಥೆಯ ಕರಾಟೆ ಶಿಕ್ಷಕರಾದ ಯಾದವ ಬೀರಂತಡ್ಕ ಮತ್ತು ದೈಹಿಕ ಶಿಕ್ಷಣ ಶಿಕ್ಷಕರಾದ ಲಕ್ಷ್ಮೀಶ ಗೌಡ ಆರಿಗ ತರಬೇತಿ ನೀಡಿರುತ್ತಾರೆ.

error: Content is protected !!
Scroll to Top