ವಿಧಾನಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭರ್ಜರಿ ಗೆಲುವು

(ನ್ಯೂಸ್ ಕಡಬ) newskadaba.com ಅ.24. ಜಿಲ್ಲೆಯಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಬಿಜೆಪಿಯ ಕಿಶೋರ್ ಕುಮಾರ್ ಪುತ್ತೂರು ಅವರು 1693 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಕಿಶೋರ್ ಕುಮಾರ್ ಅವರು ಎಂ.ಎ. ಸ್ನಾತಕೋತ್ತರ ಪದವೀಧರರಾಗಿದ್ದು, ಅವರ ವಿದ್ಯಾರ್ಥಿ ಜೀವನದಿಂದಲೇ ಸಂಘ ಪರಿವಾರದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದವರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಲ್ಲಿ (ಎಬಿವಿಪಿ) ವಿವಿಧ ಹುದ್ದೆಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಪ್ರಸ್ತುತ ಅವರು ದ.ಕ. ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಅ.21ರಂದು ಚುನಾವಣೆ ನಡೆದಿತ್ತು.

error: Content is protected !!
Scroll to Top