ಮೊಬೈಲ್ ಟವರ್ ಕಳ್ಳತನ: ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ. 24. ಖಾಲಿ ಜಾಗದಲ್ಲಿ ಅಳವಡಿಸಿದ್ದ ಮೊಬೈಲ್ ಟವರ್ ಕಳ್ಳತನವಾಗಿರುವ ವಿಚಿತ್ರ ಘಟನೆ ಟಿಪ್ಪು ನಗರದಲ್ಲಿ ನಡೆದಿರುವುದು ವರದಿಯಾಗಿದೆ.

ಶಿವಮೊಗ್ಗ ಟಿಪ್ಪುನಗರದ ಖಾಲಿ ಜಾಗದಲ್ಲಿ ಖಾಸಗಿ ಸಂಸ್ಥೆಯೊಂದು 2008ರಲ್ಲಿ ಮೊಬೈಲ್ ಟವ‌ರ್ ಅಳವಡಿಸಿತ್ತು. ಕೋವಿಡ್ ಸಂದರ್ಭ ನಿರ್ವಹಣೆ ಸಾಧ್ಯವಾಗಿರಲಿಲ್ಲ. ಆ ಬಳಿಕ ಸಂಸ್ಥೆಯವರು ಸ್ಥಳಕ್ಕೆ ಬಂದಾಗ ಮೊಬೈಲ್ ಟವರ್ ಮತ್ತು ಅದಕ್ಕೆ ಅಳವಡಿಸಿದ್ದ ಬಿಡಿ ಭಾಗಗಳು ನಾಪತ್ತೆಯಾಗಿದ್ದವು ಎಂದು ಖಾಸಗಿ ಸಂಸ್ಥೆ ನ್ಯಾಯಾಲಯದಲ್ಲಿ ದೂರು ದಾಖಲಿಸಿತ್ತು. ಈಗ ನ್ಯಾಯಾಲಯದ ಸೂಚನೆ ಮೇರೆಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟವರ್ ಮತ್ತು ಬಿಡಿ ಭಾಗಗಳ ಅಂದಾಜು ಮೌಲ್ಯ 46.30 ಲಕ್ಷ ರೂ. ಎಂದು ಉಲ್ಲೇಖಿಸಲಾಗಿದೆ.

Also Read  ಕ್ಯಾಂಪಸ್ ಫ್ರಂಟ್ ಸದಸ್ಯತ್ವ ಅಭಿಯಾನ ಗಂಗಾವತಿಯಲ್ಲಿ ಉದ್ಘಾಟನೆ ➤ ಸಾವಿರಕ್ಕೂ ಮಿಕ್ಕ ವಿದ್ಯಾರ್ಥಿಗಳು ಸೇರ್ಪಡೆ

 

 

error: Content is protected !!
Scroll to Top