ಹಾವು ಕಚ್ಚಿ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಅ.24.  ಹಾವು ಕಡಿದು ವ್ಯಕ್ತಿಯೋರ್ವ ಮೃತಪಟ್ಟ ದಾರುಣ ಘಟನೆ ಮಂಜೇಶ್ವರದ ಮೀಯಪದವು ಎಂಬಲ್ಲಿ ನಡೆದಿದೆ.

ಮೃತಪಟ್ಟವರನ್ನು ಮೀಯಪದವು ಪಳ್ಳತ್ತಡ್ಕ ನಿವಾಸಿ ಅಶೋಕ್ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ ಅಶೋಕ್ ಅವರಿಗೆ ಮನೆಯ ಸಿಟೌಟ್ ನಲ್ಲಿದ್ದ ಸಂದರ್ಭ ಹಾವು ಕಡಿತಕ್ಕೊಳಗಾಗಿ ಗಾಯಗೊಂಡಿದ್ದರು. ಬಳಿಕ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

error: Content is protected !!
Scroll to Top