ಕಡಬ: ಪರಿಸರದಲ್ಲಿ ಭಾರೀ ಗಾಳಿ ಮಳೆ – ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಸವಾರನನ್ನು ರಕ್ಷಿಸಿದ ಸ್ಥಳೀಯರು

(ನ್ಯೂಸ್ ಕಡಬ) newskadaba.com ಕಡಬ, ಅ.24. ಕಡಬ ಪರಿಸರದಲ್ಲಿ ಗುರುವಾರ ಸಂಜೆ ಭಾರೀ ಗಾಳಿ‌ಮಳೆ ಸುರಿದಿದ್ದು, ಹಲವೆಡೆ ಮರಗಳು ಧರೆಗುರುಳಿದ ಪರಿಣಾಮ ಹಲವಾರು ವಿದ್ಯುತ್ ಕಂಬಗಳಿಗೆ ಹಾನಿಯಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.

ತಾಲೂಕಿನ ನೆಟ್ಟಣ ಸಮೀಪ ಹಲವು ಮರಗಳು ಧರಾಶಾಯಿಯಾಗಿದ್ದು, ಇದರಿಂದಾಗಿ ಹಲವು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಕಡಬದಿಂದ ಸುಬ್ರಹ್ಮಣ್ಯ ಮಾರ್ಗದ ವಿದ್ಯುತ್ ಸಂಚಾರ ಕಡಿತಗೊಂಡಿದೆ. ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಪೆರಿಯಶಾಂತಿ ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನವೊಂದು ನೀರಿನಲ್ಲಿ‌ ಕೊಚ್ಚಿಕೊಂಡು ಹೋಗುವುದನ್ನು ಕಂಡ ಸ್ಥಳೀಯರು ಸವಾರನನ್ನು ರಕ್ಷಣೆ ಮಾಡಿದ್ದಾರೆ.

Also Read  ಪ್ರವಾದಿ ಮಹಮ್ಮದ್ (ಸ.ಅ) ರವರ ಬಗ್ಗೆ ಫೇಸ್‌ಬುಕ್‌ ನಲ್ಲಿ ಅವಹೇಳನ ➤ ಆರೋಪಿಯ ವಿರುದ್ಧ ಕ್ರಮಕ್ಕೆ ಎಸ್ಕೆಎಸ್ಸೆಸ್ಸೆಫ್ ನಿಂದ ಕಡಬ ಠಾಣೆಗೆ ದೂರು

error: Content is protected !!
Scroll to Top