ಜಾಮೀನು ಪಡೆದು ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

crime, arrest, suspected

(ನ್ಯೂಸ್ ಕಡಬ) newskadaba.com ಕಾಪು, ಅ.25. ಕಾರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದಿಂದ ಜಾಮೀನು ಪಡೆದು ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾಪು ಪೊಲೀಸರು ಅ. 22ರಂದು ಕೇರಳದ ಕಣ್ಣೂರು ಏರ್‌ಪೋರ್ಟ್‌ನಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಅಶ್ಮತ್ ಅಲಿ(35) ಎಂದು ಗುರುತಿಸಲಾಗಿದೆ. ಆರೋಪಿ ಅಶ್ಮತ್ ಅಲಿ ವಿರುದ್ಧ 2019ರಲ್ಲಿ ಕಾಪು ಪೊಲೀಸ್ ಠಾಣೆಯಲ್ಲಿ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿ ಅದನ್ನು ವೀಡಿಯೋ ಮಾಡಿ ಬ್ಲಾಕ್‌ಮೇಲ್ ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಆರೋಪಿಯು ಉಡುಪಿಯ 2ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ 2019ರ ಸೆ. 6ರಂದು ಜಾಮೀನು ಪಡೆದು ಬಿಡುಗಡೆ ಹೊಂದಿದ್ದ. ಅ. 21ರಂದು ಈತ ಕಣ್ಣೂರು ಮಟ್ಟನೂರ್ ಏರ್‌ಪೋರ್ಟ್‌ಗೆ ಬಂದಿಳಿದಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ.

Also Read  2030ರ ನಂತರ ಎಲೆಕ್ಟ್ರಿಕ್ ವಾಹನಗಳ ಕಾರುಬಾರು

 

error: Content is protected !!
Scroll to Top