(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.25. ಗಾಳಿಪಟ ಹಾರಿಸಲು ಚೀನಿ ದಾರ ಅಥವಾ ಮಾಂಜಾ ದಾರವನ್ನು ಬಳಸುವುದನ್ನು ಸರ್ಕಾರ ನಿಷೇಧಿಸಿದೆ. ಕೇವಲ ಹತ್ತಿಯಿಂದ ತಯಾರಿಸಿದ ದಾರವನ್ನು ಮಾತ್ರ ಬಳಸುವಂತೆ ಸೂಚನೆ ನೀಡಲಾಗಿದೆ.
ರಾಜ್ಯ ಸರ್ಕಾರ 2016ರ ಅಧಿಸೂಚನೆಗೆ ಕೆಲ ತಿದ್ದುಪಡಿಯನ್ನು ಮಾಡಿ ಆದೇಶವನ್ನು ಹೊರಡಿಸಿದೆ. ಯಾವುದೇ ವ್ಯಕ್ತಿ, ನೈಲಾನ್ ಮತ್ತು ಗಾಜು ಮತ್ತಿತರ ಅಪಾಯಕಾರಿ ವಸ್ತುಗಳನ್ನು ಮಾರಾಟ ಮಾಡುವಂತಿಲ್ಲ. ಚೀನಿ ದಾರ ಅಥವಾ ಮಾಂಜಾ ದಾರ ತಯಾರು, ದಾಸ್ತಾನು ಮಾಡುವುದವುದನ್ನೂ ನಿಷೇಧಿಸಲಾಗಿದೆ. ಒಂದು ವೇಳೆ ಬಳಸಿದ್ದು, ತಯಾರು ಮತ್ತು ಮಾರಾಟ ಮಾಡಿದ್ದು ಕಂಡುಬಂದಲ್ಲಿ ಕಠಿಣಕ್ರಮ ಕೈಗೊಳ್ಳುವುದಾಗಿ ಎಂಬುವುದಾಗಿ ಎಚ್ಚರಿಕೆ ನೀಡಿದೆ. ಕೇವಲ ಹತ್ತಿಯಿಂದ ತಯಾರಿಸಿದ ದಾರವನ್ನು ಮಾತ್ರ ಗಾಳಿಪಟ ಹಾರಾಟಕ್ಕೆ ಬಳಸಬೇಕು ಎಂದು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.