(ನ್ಯೂಸ್ ಕಡಬ) newskadaba.com ಅ.25, ಬೆಂಗಳೂರು: ಇಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಹಾಸನ, ಕೊಡಗು, ಮಂಡ್ಯ, ಚಾಮರಾಜನಗರ, ಮೈಸೂರು, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಅ.26ರಂದು ದಕ್ಷಿಣ ಒಳಗಿನ ಕರ್ನಾಟಕದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಕರ್ನಾಟಕ ಮತ್ತು ಉತ್ತರ ಒಳ ಕರ್ನಾಟಕದ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆ ಇದೆ. ಹಾಗೆಯೇ ಅ.27ರಂದು ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಅ.28ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳ ಕರ್ನಾಟಕದ ರಾಯಚೂರು, ಬೀದರ್, ಕಲಬುರಗಿ, ವಿಜಯಪುರ, ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಅ.29ರಂದು ರಾಜ್ಯದ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅ.30ರಂದು ಉತ್ತರ ಒಳನಾಡಿನ ಜಿಲ್ಲೆಗಳ ಮೇಲೆ ಹಲವು ಸ್ಥಳಗಳಲ್ಲಿ ಮತ್ತು ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.