ಬೆಳ್ತಂಗಡಿ: ಆಕ್ಟಿವಾ – ಕಾರು ನಡುವೆ ಅಪಘಾತ ► ಕಾಲೇಜು ವಿದ್ಯಾರ್ಥಿ ಮೃತ್ಯು



(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ.19. ಕಾರು‌ ಮತ್ತು ಆಕ್ಟಿವಾ ನಡುವೆ ಢಿಕ್ಕಿ ಸಂಭವಿಸಿ ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸೋಮವಾರ ಸಂಜೆ ಬೆಳ್ತಂಗಡಿಯ ಅಳದಂಗಡಿಯಲ್ಲಿ ನಡೆದಿದೆ.







ಮೃತ ವಿದ್ಯಾರ್ಥಿಯನ್ನು ಕಾರ್ಕಳದ ಹೊಸ್ಮಾರು‌ ನಿವಾಸಿ ಸುಧಾಕರ್ ಹೆಗ್ಡೆ ಎಂಬವರ ಪುತ್ರ ಉಜಿರೆ ಎಸ್ಡಿಎಂ ಕಾಲೇಜಿನ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ ಸುಚಿನ್ ಎಂದು ಗುರುತಿಸಲಾಗಿದೆ. ಈತ ಹೋಂಡಾ ಆಕ್ಟಿವಾದಲ್ಲಿ ತೆರಳುತ್ತಿದ್ದಾಗ ಆಳದಂಗಡಿ ಸಮೀಪ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ರಸ್ತೆಗೆಸೆಯಲ್ಪಟ್ಟನೆನ್ನಲಾಗಿದೆ. ಗಂಭೀರ ಗಾಯಗೊಂಡ ಸುಚಿನ್ ನನ್ನು ಆಸ್ಪತ್ರೆಗೆ ದಾಖಲಾಯಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟನೆನ್ನಲಾಗಿದೆ. ಮೃತದೇಹವನ್ನು ಬೆಳ್ತಂಗಡಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.






error: Content is protected !!
Scroll to Top