ಒಡಿಶಾ ಕರಾವಳಿಗೆ ಅಪ್ಪಳಿಸಿದ ಡಾನಾ ಚಂಡಮಾರುತ

(ನ್ಯೂಸ್ ಕಡಬ) newskadaba.com ಕೊಲ್ಕತ್ತಾ, ಅ.25. ಡಾನಾ ಚಂಡಮಾರುತವು ಒಡಿಶಾ ಕರಾವಳಿಗೆ ಅಪ್ಪಳಿಸಿದ್ದು, ಇದರಿಂದಾಗಿ ಹಲವಾರು ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿ ಬೀಸುತ್ತಿದೆ.

ಚಂಡಮಾರುತ ತೀವ್ರ ಸ್ವರೂಪ ಪಡೆದಿದ್ದು ಒಡಿಶಾ, ಬಂಗಾಳದ ತೀರ ಪ್ರದೇಶಗಳಲ್ಲಿ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುತ್ತಿದೆ. ಗಂಟೆಗೆ 120 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು ಉತ್ತರ ವಾಯುವ್ಯ ದಿಕ್ಕಿನತ್ತ ಚಲಿಸುತ್ತಿದೆ. ಜನಜೀವನ ತತ್ತರಿಸಿದೆ. ವಿಮಾನಯಾನ, ರೈಲ್ವೇ ಸಂಚಾರವನ್ನು ರದ್ದುಗೊಳಿಸಲಾಗಿದ್ದು ಮುಂಜಾಗ್ರತಾ ಕ್ರಮವಾಗಿ 10ಲಕ್ಷ ಜನರನ್ನು ಸ್ಥಳಾಂತರಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ.

Also Read  ಹರಿದ್ವಾರದಲ್ಲಿ ಗಂಗಾಜಲ ಕುಡಿಯಲು ಅಸುರಕ್ಷಿತ - ಮಾಲಿನ್ಯ ನಿಯಂತ್ರಣ ಮಂಡಳಿ

 

error: Content is protected !!
Scroll to Top