ಅಧಿಕೃತ ನಿವಾಸದಲ್ಲಿ ಅಯೋಧ್ಯೆ ಎಂಡಿಎಂ ಮೃತದೇಹ ಪತ್ತೆ..!



(ನ್ಯೂಸ್ ಕಡಬ) newskadaba.com ಲಕ್ನೋ, ಅ.25. ಅಯೋಧ್ಯೆಯ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್(ಎಂಡಿಎಂ) ತಮ್ಮ ಅಧಿಕೃತ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸುರ್ಜಿತ್ ಸಿಂಗ್ (58) ಕೊತ್ವಾಲಿ ನಗರದ ಸಿವಿಲ್ ಲೈನ್ಸ್ ಪ್ರದೇಶದ ಸುರ್ಸಾರಿ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಅ.24ರಂದು ನಿಗೂಢವಾಗಿ ಮೃತಪಟ್ಟಿದ್ದಾರೆ.







ಮೂಲಗಳ ಪ್ರಕಾರ ಸಿಂಗ್ ಮೃತದೇಹ ಪತ್ತೆಯಾದ ಕೋಣೆಯ ಸುತ್ತ ನೆಲದ ಮೇಲೆ ರಕ್ತ ಕಂಡುಬಂದಿದೆ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡವೂ ಆಗಮಿಸಿದೆ. ಅವರ ಸಾವು ಆತ್ಮಹತ್ಯೆಯೋ ಅಥವಾ ಕೊಲೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ತನಿಖೆ ಹಾಗೂ ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ಕಾರಣ ಸ್ಪಷ್ಟವಾಗಲಿದೆ ಎಂದು ಪೊಲೀಸರು ಹೇಳಿದ್ದಾರೆ.






 

error: Content is protected !!
Scroll to Top