ಬಸ್‌ ಸೀಟ್ ವಿಚಾರಕ್ಕೆ ಚಪ್ಪಲಿಯಲ್ಲಿ ಹೊಡೆದಾಡಿದ ಮಹಿಳೆಯರು..!



(ನ್ಯೂಸ್ ಕಡಬ) newskadaba.com ಬೆಳಗಾವಿ, ಅ.25. ಸರ್ಕಾರಿ ಬಸ್ಸಿನಲ್ಲಿ ಸೀಟ್‌ ವಿಚಾರಕ್ಕೆ ಮಹಿಳೆಯರು ಚಪ್ಪಲಿಯಲ್ಲಿ ಹೊಡೆದಾಡಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.







ಸವದತ್ತಿ ರೇಣುಕಾ ಯಲ್ಲಮ್ಮದೇವಿ ದರ್ಶನ ಪಡೆಯಲು ಸವದತ್ತಿಗೆ ಹೋಗುವ ಬಸ್ಸನ್ನು ಮಹಿಳೆಯರು ಹತ್ತಿದ್ದಾರೆ. ಈ ವೇಳೆ ಸೀಟ್ ನನ್ನದು ನನ್ನದು ಅಂತಾ ಮಹಿಳೆಯರ ಮಧ್ಯೆ ಜಗಳ ಆರಂಭವಾಗಿದೆ. ಮೊದಲಿಗೆ ಮಹಿಳೆಯರು ಪರಸ್ಪರ ಬೈದಾಡಿಕೊಂಡಿದ್ದಾರೆ. ನಂತರ ಕೈಕೈ ಮಿಲಾಯಿಸಿ ಚಪ್ಪಲಿಯಲ್ಲಿ ಹೊಡೆದಾಡಿದ್ದಾರೆ. ಈ ವೇಳೆ ಅಡ್ಡ ಬಂದ ಬಾಲಕಿಗೂ ಚಪ್ಪಲಿಯಿಂದ ಮಹಿಳೆ ಹೊಡೆದಿದ್ದಾಳೆ.






 

error: Content is protected !!
Scroll to Top