ನ.15ರೊಳಗೆ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಬಿಬಿಎಂಪಿ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.26. ನವೆಂಬರ್‌ 15ರೊಳಗೆ ನಗರದಲ್ಲಿನ ರಾಜಕಾಲುವೆಗಳ ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ಅಧಿಕಾರಿಗಳಿಗೆ ಬಿಬಿಎಂಪಿ ಸೂಚನೆ ನೀಡಿದೆ.

ಬೃಹತ್ ಮಳೆನೀರು ಕಾಲುವೆ ಹಾಗೂ ಕೆರೆಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ತಹಶೀಲ್ದಾರ್‌ಗಳು ಹಾಗೂ ಪಾಲಿಕೆಯ ಹಿರಿಯ ಅಧಿಕಾರಿಗಳೊಂದಿಗೆ ಶುಕ್ರವಾರ ನಡೆಸಿದ ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಎಲ್ಲಾ ವಲಯ ಆಯುಕ್ತರಿಗೆ ಸೂಚನೆ ನೀಡಿ, ಈ ಗಡುವು ನೀಡಿದರು. ರಾಜಕಾಲುವೆ ಒತ್ತುವರಿ ತೆರವು ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

Also Read  ಕಾಫಿ ಸಾಮ್ರಾಜ್ಯ ಕಟ್ಟಿದ ಮಾಲಕ ನಿಗೂಢವಾಗಿ ನಾಪತ್ತೆ ➤ ಶೇಕಡಾ 20.ರಷ್ಟು ಕುಸಿತ ಕಂಡ ಕಾಫಿ ಡೇ ಶೇರುಗಳು

 

error: Content is protected !!
Scroll to Top