ಕರ್ನಾಟಕಕ್ಕೆ ಪ್ರತ್ಯೇಕ ಧ್ವಜಕ್ಕೆ ಸಂಬಂದಿಸಿದ ಅರ್ಜಿ ವಜಾ: ಹೈ ಕೋರ್ಟ್

(ನ್ಯೂಸ್ ಕಡಬ) newskadaba.com .26, ಬೆಂಗಳೂರು ಪ್ರತ್ಯೇಕ ಧ್ವಜ ಹೊಂದಲು ರಾಜ್ಯ ಸರ್ಕಾರದ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶಿಸಬೇಕು ಎಂದು ಕೋರಿ ಕರ್ನಾಟಕ ರಾಜ್ಯವು  ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಬಗ್ಗೆ  ಬೆಳಗಾವಿ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ಪ್ರತ್ಯೇಕ ನಾಡ ಧ್ವಜ ಹೊಂದುವ ವಿಚಾರವು ನ್ಯಾಯಾಲಯದ ವಿಚಾರಣಾ ಪರಿದಿಗೆ ಒಳಪಡುವುದಿಲ್ಲ. ಅರ್ಜಿದಾರರು ತಪ್ಪಾಗಿ ಅರ್ಥೈಸಿ ಈ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣಾ ಮಾನ್ಯತೆಗೆ ಸಂಬಂಧಿಸಿ ನ್ಯಾಯಾಲಯವು ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ ಎಂದು ತಿಳಿಸಿ ಅರ್ಜಿ ವಜಾ ಮಾಡಿದೆ. ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲ ಎಸ್.ಉಮಾಪತಿ, ಹಿರಿಯ ಪತ್ರಕರ್ತ ಪಾಟೀಲ್ ಪುಟ್ಟಪ್ಪ ಅವರು ಕರ್ನಾಟಕ ಪ್ರತ್ಯೇಕ ಧ್ವಜ ಹೊಂದುವ ಕುರಿತು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು.

Also Read  ಹಿಂದೂ ಯುವಕನಿಂದ ಮರ್ಧಾಳ ಮಸೀದಿಯಲ್ಲಿ ಇಫ್ತಾರ್ ಕೂಟ ► ಸೌಹಾರ್ದತೆಗೆ ಸಾಕ್ಷಿಯಾದ ಯುವಕನ ಕಾರ್ಯ

error: Content is protected !!
Scroll to Top