(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.26. ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಹಬ್ಬಕ್ಕೆ ಬೆಂಗಳೂರಿನಿಂದ ಊರಿಗೆ ತೆರಳುವವರು ಹಾಗೂ ನಂತರ ಮರಳುವವರ ಸಂಖ್ಯೆಯಲ್ಲಿ ಅಗಾಧ ಏರಿಕೆಯಾಗಲಿದೆ.
ದೀಪಾವಳಿ ಹಬ್ಬದ ಒಂದು ವಾರ ಮೊದಲು ಎಚ್ಚೆತ್ತುಕೊಂಡಿರುವ ಸಾರಿಗೆ ಇಲಾಖೆ, ಹೀಗೆ ಮಿತಿ ಮೀರಿ ದರ ಹೆಚ್ಚಿಸುವ ಖಾಸಗಿ ಬಸ್ಸುಗಳ ಮೇಲೆ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ. ನಿಯಮ ಮೀರಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಬಸ್ಸಿನ ಲೈಸೆನ್ಸ್ ಕೂಡ ರದ್ದುಗೊಳಿಸುವುದಾಗಿ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಜನರು ಖಾಸಗಿ ಬಸ್ ಗಳು ದುಬಾರಿ ಪ್ರಯಾಣ ದರವನ್ನು ವಸೂಲಿ ಮಾಡುತ್ತಿದ್ದರೆ ಸಾರಿಗೆ ಇಲಾಖೆಯ ಸಹಾಯವಾಣಿ ಸಂಖ್ಯೆ 9449863429, 9449863426 ಗೆ ಕರೆ ಮಾಡಿ ದೂರು ನೀಡುವಂತೆ ಮನವಿ ಮಾಡಿದೆ.