ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ: ನಿಷೇದಾಜ್ಞೆ

(ನ್ಯೂಸ್ ಕಡಬ) newskadaba.com ಅ.26. ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಕನ್ನಡ ಪರೀಕ್ಷೆ -2 ಮತ್ತು ಪೇಪರ್-1 ಮತ್ತು ಪೇಪರ್-2 ಪರೀಕ್ಷೆಗಳು ನಡೆಯಲಿರುವ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಅಕ್ಟೋಬರ್ 26ರಿಂದ 27ರ ವರೆಗೆ 18 ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಉಪಪೊಲೀಸ್ ಆಯುಕ್ತ ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಸಿದ್ಧಾರ್ಥ್ ಗೋಯಲ್ ಆದೇಶಿಸಿದ್ದಾರೆ.

ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು/ ಇನ್ನಾವುದೇ ವಸ್ತುಗಳನ್ನು ಹಂಚುವುದು/ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಕ್ಷಾರಕ (ಆಸಿಡ್) ಅಥವಾ ಸ್ಫೋಟಕ ವಸ್ತುಗಳನ್ನು ಕೊಂಡುಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

Also Read  ಸ್ನಾನಕ್ಕೆ ತೆರಳಿದ ಇಬ್ಬರು ಬಾಲಕರು ನೀರು ಪಾಲು ➤ ಓರ್ವನ ರಕ್ಷಣೆ

ನಿಷೇಧಿತ ಪ್ರದೇಶದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಅಭ್ಯರ್ಥಿಗಳನ್ನು ಹೊರತುಪಡಿಸಿ ಸಾರ್ವಜನಿಕರು 5ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು ತಿರುಗಾಡುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದ ಆವರಣದಲ್ಲಿ ಮೊಬೈಲ್ ದೂರವಾಣಿ, ಬ್ಲೂ ಟೂತ್ ಹಾಗೂ ಪೇಜರ್ ಇತ್ಯಾದಿ ಎಲೆಕ್ಟ್ರಾನಿಕ್ಸ್ ಸಂಪರ್ಕ ಉಪಕರಣಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

error: Content is protected !!
Scroll to Top