ಹಸಿರು ಪಟಾಕಿ ಬಳಕೆಗೆ ಸೂಚನೆ

(ನ್ಯೂಸ್ ಕಡಬ) newskadaba.com ಅ.26. ಪಟಾಕಿ ಮತ್ತು ಸಿಡಿಮದ್ದುಗಳನ್ನು ಉಪಯೋಗಿಸದೆ ಶಬ್ದ ಮಾಲಿನ್ಯ ಕಡಿಮೆ ಮಾಡುವ ಸಲುವಾಗಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಇತರ ಪಟಾಕಿಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಹಬ್ಬದ ಅವಧಿ ಸಂಜೆ ಆರರಿಂದ ರಾತ್ರಿ ಹತ್ತು ಗಂಟೆಯವರೆಗೆ ಮಾತ್ರ ಹಸಿರು ಪಟಾಕಿ ಮತ್ತು ಸಿಡಿಮದ್ದುಗಳನ್ನು ಸಿಡಿಸುವುದಕ್ಕೆ ಒಪ್ಪಿಗೆ ನೀಡಲಾಗಿದೆ. ಹಾಗೂ ಆಚರಣೆಯ ಸಮಯದಲ್ಲಿ ಯಾವುದೇ ಪ್ರಾಣಿ-ಪಕ್ಷಿಗಳು ಮಕ್ಕಳು ಹಾಗೂ ವೃದ್ಧರಿಗೆ ತೊಂದರೆ ಆಗದಂತೆ ಪಟಾಕಿಗಳನ್ನು ಬಳಸಬೇಕು. ಉಳಿದ ಸಮಯದಲ್ಲಿ ಪಟಾಕಿ, ಸಿಡಿಮದ್ದುಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ಪರಿಸರ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top